‘ನೇತ್ರ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವವರು ಆಸ್ಪತ್ರೆಗೆ ಬರುವಾಗ ದಾಡಿ, ಕಟಿಂಗ್, ತಲೆ ಸ್ನಾನ ಮತ್ತು ಶುಭ್ರವಾದ ಬಟ್ಟೆಗಳನ್ನು ಧರಿಸಿ ಬರಬೇಕು. ವೋಟರ್ ಐಡಿ, ರೇಷನ್, ಆಧಾರ್ ಕಾರ್ಡ್ ಜೆರಾಕ್ಸ್ ಪತ್ರಿಗಳನ್ನು ಕಡ್ಡಾಯವಾಗಿ ತರಬೇಕು. ಆಧಾರ್ ಕಾರ್ಡ್ ಜೆರಾಕ್ಸ್ ಪತ್ರಿ ಮೇಲೆ ತಮ್ಮ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಬರೆಯಬೇಕು’ ಎಂದು ಹೇಳಿದರು.