ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಉಚಿತ ಲಸಿಕಾ ಅಭಿಯಾನ

Last Updated 20 ಜುಲೈ 2021, 17:11 IST
ಅಕ್ಷರ ಗಾತ್ರ

ಪಸಪುಲ್: ‘ಕೋವಿಡ್ ಹರಡುವಿಕೆಯನ್ನು ನಿಲ್ಲಿಸಲು ಹಾಗೂ ಕೋವಿಡ್ ವಿರುದ್ಧ ಸೆಣೆಸಲು ನಮ್ಮಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ. ಲಸಿಕೆ ಹಾಕಿಸಿಕೊಂಡರೆ ಮಾತ್ರ ನಾವು ಕೋವಿಡ್ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ. ಅದಕ್ಕೆ ಎಲ್ಲರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು‘ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಮ್ಮ ಜಾಕಾ ಮನವಿ ಮಾಡಿದರು.

ಜಿಲ್ಲೆಯ ಪಸಪುಲ್ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ಉಚಿತ ಲಸಿಕಾ ಅಭಿಯಾನವನ್ನು ಎರಡನೇ ಡೋಸ್ ಲಸಿಕೆಯನ್ನು ಪಡೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ’ಕೋವಿಡ್‌ನಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಸಂಕಟವನ್ನೂ ಅನುಭವಿಸಿದ್ದಾರೆ. ಕೋವಿಡ್‌ನಿಂದ ಸುರಕ್ಷಿತವಾಗಿಸಿಕೊಳ್ಳಲು ಲಸಿಕೆ ಪಡೆಯುವುದು ಅತ್ಯವಶ್ಯಕ‘ ಎಂದರು.

ಲಸಿಕೆಯು ಸಂಪೂರ್ಣ ಸುರಕ್ಷಿತವಾಗಿದ್ದು ಎಲ್ಲರೂ ಸ್ವಯಂ ಪ್ರೇರಿತರಾಗಿ ಲಸಿಕೆಯನ್ನು ಪಡೆಯಬೇಕು ಎಂದು ಕೋರಿದರು.

‘ಮೊದಲ ಅಲೆಗಿಂತಲೂ ಎರಡನೇ ಅಲೆ ತೀವ್ರವಾಗಿತ್ತು. ಈಗ ಮೂರನೇ ಅಲೆ ಬರುವ ಸಾಧ್ಯತೆಗಳಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಆದ್ದರಿಂದ ಎಲ್ಲರೂ ಲಸಿಕೆ ಪಡೆಯುವ ಮೂಲಕ ಕೋವಿಡ್ ತಡೆಯುವಲ್ಲಿ ಕೈಜೋಡಿಸೋಣ’ ಎಂದು ಐಎಂಎ ಕಾರ್ಯದರ್ಶಿ ವೀರೇಶ ಜಾಕಾ ಕರೆ ನೀಡಿದರು.

ಆರೋಗ್ಯ ಇಲಾಕೆಯ ಆರ್.ಸಿ.ಎಚ್. ಡಾ.ಲಕ್ಷ್ಮೀಕಾಂತ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ, ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT