ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಾಂಧೀಜಿ ಅಹಿಂಸಾ ಮಾರ್ಗದಿಂದ ಸ್ವಾತಂತ್ರ್ಯ’

ಜಿಲ್ಲಾ ನ್ಯಾಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ, ನ್ಯಾ.ಶಿವನಗೌಡ ಅಭಿಮತ
Last Updated 5 ಅಕ್ಟೋಬರ್ 2019, 10:03 IST
ಅಕ್ಷರ ಗಾತ್ರ

ಯಾದಗಿರಿ: ‘ಮಹಾತ್ಮ ಗಾಂಧೀಜಿಯವರು ಅಹಿಂಸಾ ಮಾರ್ಗದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವನಗೌಡ ಹೇಳಿದರು.

ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ನ್ಯಾಯಾಂಗ ಇಲಾಖೆ ಸಹಯೋಗದೊಂದಿಗೆ ಇಲ್ಲಿನ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭಾರತದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿಯವರು ಜೀವನವನ್ನು ಮುಡಿಪಾಗಿಟ್ಟಿದ್ದರು. ಗಾಂಧೀಜಿಯವರ ಜೀವನ ಸರಳತೆ, ಅಹಿಂಸೆ ಮತ್ತು ಸತ್ಯದಿಂದ ಕೂಡಿತ್ತು. ಅವರ ಜೀವನದ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು’ ಎಂದು ಸಲಹೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೊಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಹಣಮಂತ್ರಾಯ ಸಿ.ಕರಡಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಜೀವನ ಚರಿತ್ರೆ ಆಧಾರಿತ ಕಿರುಚಿತ್ರ ಪ್ರದರ್ಶಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ.ಸಾಲಮಂಟಪಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಸಿ.ಎಸ್.ಮಾಲಿ ಪಾಟೀಲ, ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಮತ್ತು ಶಾಲಾ ಮಕ್ಕಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT