ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ। ಗಣಪತಿ ಪ್ರತಿಷ್ಠಾಪನೆ, ಗಮನ ಸೆಳೆಯುತ್ತಿರುವ ಮೂರ್ತಿಗಳು

ಗೌರಿಸುತನಿಗೆ ಸಂಭ್ರಮದ ಸ್ವಾಗತ
Last Updated 1 ಸೆಪ್ಟೆಂಬರ್ 2022, 16:17 IST
ಅಕ್ಷರ ಗಾತ್ರ

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗಣೇಶ ಚತುರ್ಥಿಯನ್ನು ಶ್ರದ್ಧಾ–ಭಕ್ತಿಯಿಂದ ಆಚರಿಸಲಾಯಿತು. ಕೊರೊನಾ ನಿರ್ಬಂಧವಿಲ್ಲದ್ದರಿಂದ ಹೆಚ್ಚಿನ ಸಂಖ್ಯೆಯಗಣೇಶಮಂಡಳಿಗಳು ಮೂರ್ತಿ ಪ‍್ರತಿಷ್ಠಾಪನೆ ಒಲವು ತೋರಿಸಿವೆ.

ಚಿಕ್ಕ ಗಾತ್ರದ ಮೂರ್ತಿ, ಆಳೆತ್ತರದ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.ಪ್ರತಿಷ್ಠಾಪನೆಗೆ ಮುನ್ನ ಹೋಮ ಹವನ ಮಾಡಲಾಯಿತು.ಗಣಪತಿ ಬಪ್ಪ ಮೋರಿಯಾ ಘೋಷಣೆಗಳು ಕೇಳಿ ಬಂದವು. ನೈವೇದ್ಯಕ್ಕೆ ಕಡಬು, ಲಾಡು, ಕರ್ಚಿಕಾಯಿ, ಹೋಳಿಗೆ ತಯಾರಿಸಿ ಅರ್ಪಿಸಲಾಯಿತು.

ವಿವಿಧ ಭಂಗಿಯ ಮೂರ್ತಿಗಳು: ಗಣೇಶೋತ್ಸವ ಅಂಗವಾಗಿ ನಗರ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಭಂಗಿಯ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಕೆಲವು ಕಡೆ ದಿ.ಪುನೀತ್‌ ರಾಜಕುಮಾರ ಅವರ ಭಾವಚಿತ್ರ ಇಟ್ಟು ನಮಿಸಿರುವುದು ಕಂಡು ಬಂತು.

ಒಂದೇ ಬಡಾವಣೆಯ ಮೂರ್ನಾಲ್ಕು ಕಡೆ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಹೂಗಳಿಂದ ಅಲಂಕಾರ ಮಾಡಲಾಗಿದೆ. ಕೆಲವು ಬಡಾವಣೆಗಳಲ್ಲಿ ರಸ್ತೆಗಳಲ್ಲಿ ವಿದ್ಯುತ್‌ ದೀಪ ಅಲಂಕಾರ ಮಾಡಿದ್ದು, ಸಾರ್ವಜನಿಕರನ್ನು ಸೆಳೆಯುತ್ತಿದೆ.

ಅಯೋಧ್ಯೆ ರಾಮ ಗಣಪತಿ, ನವಿಲು ಗಣಪತಿ, ಶ್ರೀರಾಮ ಗಣಪತಿ, ಸುಖಾಸಿನ ಗಣಪತಿ, ಕೃಷ್ಣಾ ಗಣಪತಿ, ಪಾರ್ವತಿ ಪರಮೇಶ್ವರ ಗಣಪತಿ, ಮಹಾರಾಜ ಗಣಪತಿ, ಗೋವು ಗಣಪತಿ ಹೀಗೆ ವಿವಿಧ ರೀತಿಯ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ.

ನಗರದ ಮೈಲಾಪುರ ಆಗಸಿಯ ಅಪ್ಪು ವೃತ್ತದ ಬಳಿ ಗಜಾನನ ಆರ್ಯ ಈಡಿಗ ಯುವಕರ ಸಂಘದಿಂದ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, 11ದಿನಗಳು ರಾತ್ರಿ ಪೂಜೆ ಹಾಗೂ ಭಜನೆ ಕಾರ್ಯಕ್ರಮ ನಡೆಯಲಿದೆ.

ಪೂಜೆ: ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಗಣೇಶಪೂಜೆ ಮಾಡಲಾಯಿತು. ಗಂಗಾಸ್ನಾನ, ವಸ್ತ್ರಾಧಾರಣೆ, ದೀಪರಾಧನೆ, ಅಭಿಷೇಕ, ಪಂಚಾಮೃತ, ಪ್ರಸಾದ, ಐದು ತರದ ಹಣ್ಣು ಇಟ್ಟು ಪೂಜೆಯ ನಂತರ ಮಹಾಮಂಗಲ ಆರತಿ ಮಾಡಲಾಯಿತು.

ಸಂಘ–ಸಂಸ್ಥೆಗಳು ಸಂಜೆ ಸಂಗೀತ, ನೃತ್ಯ ಕಾರ್ಯಕ್ರಮ ಹಮ್ಮಿಕೊಂಡಿವೆ. ರಾತ್ರಿ ಭಜನೆ ಕಾರ್ಯಕ್ರಮ ನಡೆದವು.

ಬೆಳಿಗ್ಗೆ ಮತ್ತು ಸಂಜೆ ಪೂಜೆ ಮಾಡಿಮಹಾಮಂಗಳಾರತಿ ನಂತರ ಪ್ರಸಾದ ವಿತರಿಸಲಾಯಿತು.ನಗರದ ಲುಂಬಿನಿ ಕೆರೆ ಸಣ್ಣ ಮತ್ತು ದೊಡ್ಡ ಕೆರೆಗಳಲ್ಲಿಮೂರ್ತಿವಿಸರ್ಜನೆಗೆ ವ್ಯವಸ್ಥೆ ಮಾಡಲಾಗಿದೆ.

ಯುವಕರ ಸಡಗರ

ಯರಗೋಳಸುತ್ತಲಿನ ಗ್ರಾಮಗಳಲ್ಲಿ ಬುಧವಾರ ವಿಜೃಂಭಣೆಯಿಂದ ಗಣೇಶ ಪ್ರತಿಷ್ಠಾಪನೆ ಮಾಡಲಾಯಿತು.

ಯುವಕರು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಟೆಂಟ್‌ ಹಾಕಿ, ಸಂಜೆ ವೇಳೆ ಮೆರವಣಿಗೆ ಮೂಲಕ ಗಣೇಶ ಮೂರ್ತಿ ತಂದು ಪ್ರತಿಷ್ಠಾಪಿಸಿದರು. ಭಕ್ತರಿಗೆ ಪ್ರಸಾದ ವ್ಯವಸ್ಥೆ, ರಾತ್ರಿ ವೇಳೆ ಸಂಗೀತ, ಭಜನೆ ಕಾರ್ಯಕ್ರಮಗಳು ಜರುಗಿದವು. ಮಹಿಳೆಯರು ಮೋದಕ ಲಾಡುಗಳನ್ನು ನೈವೇದ್ಯ ರೂಪದಲ್ಲಿ ಅರ್ಪಿಸಿದರು.

ಮನೆಗಳಲ್ಲಿ ಬೆಳಗ್ಗೆ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿ ತಡರಾತ್ರಿ ವಿಸರ್ಜಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT