ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶೋತ್ಸವ ಸರಳ ಆಚರಣೆಗೆ ಕರೆ

Last Updated 15 ಆಗಸ್ಟ್ 2020, 14:39 IST
ಅಕ್ಷರ ಗಾತ್ರ

ಯಾದಗಿರಿ: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗಣೇಶ ಚತುರ್ಥಿಯನ್ನು ದೇವಸ್ಥಾನಗಳಲ್ಲಿ ಅಥವಾ ತಮ್ಮ ತಮ್ಮ ಮನೆಗಳಲ್ಲಿ ಸರಳ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಕರೆ ನೀಡಿದರು.

ಶುಕ್ರವಾರ ಸಂಜೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಗಣೇಶೋತ್ಸವವು ಧಾರ್ಮಿಕ ಹಬ್ಬವಾಗಿದ್ದು, ಮನುಕುಲಕ್ಕೆ ಮಾರಕವಾಗಿರುವ ಕೋವಿಡ್-19 ಸೋಂಕು ಹರಡದಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಆಚರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಈ ಭಾರಿ ಗಣೇಶ ಹಬ್ಬದಲ್ಲಿ ಗಣೇಶ ಮೂರ್ತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವಂತಿಲ್ಲ. ಪರಿಸರ ಮತ್ತು ಆರೋಗ್ಯದ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ನದಿ, ಕೆರೆ, ಕೊಳ, ಬಾವಿಗಳಲ್ಲಿ ಗಣೇಶ ಮೂರ್ತಿಗಳನ್ನುವಿಸರ್ಜನೆ ಮಾಡಬಾರದು ಎಂದು ತಿಳಿಸಿದರು.

ಮಣ್ಣು ಮತ್ತು ಅರಿಶಿಣದಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ)ನಿಂದ ನಿರ್ಮಿಸಿದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಸಂಪೂರ್ಣ ನಿಷೇಧವಾಗಿದೆ. ದೇವಸ್ಥಾನಗಳಲ್ಲಿ ಗಣೇಶ ಹಬ್ಬ ಆಚರಿಸುವರು, ಕಡ್ಡಾಯವಾಗಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ದರ್ಶಕ್ಕಾಗಿ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು. ಭಕ್ತರು ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಲು ಭಕ್ತರಿಗೆ ಸೂಚಿಸಬೇಕು ಎಂದು ಸಭೆಯಲ್ಲಿ ಅವರು ಹೇಳಿದರು.

ಮುಖ್ಯವಾಗಿ ಜಿಲ್ಲೆಯಲ್ಲಿನ ದೇವಸ್ಥಾನಗಳಲ್ಲಿ ಗಣೇಶೋತ್ಸವನ್ನು ಕೋವಿಡ್-19 ಹಿನ್ನೆಲೆಯಲ್ಲಿ ಆಚರಿಸುವ ಬಗ್ಗೆ ಶೀಘ್ರದಲ್ಲೇ ಜಿಲ್ಲಾಡಳಿತದಿಂದ ಮಾರ್ಗ ಸೂಚಿಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾದ ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಋಷಿಕೇಶ್ ಭಗವಾನ ಸೋನವಣೆ, ಉಪವಿಭಾಗಾಧಿಕಾರಿಶಂಕರಗೌಡ ಎಸ್. ಸೋಮನಾಳ, ವೀರಶೈವ ಸಮಾಜದ ಆಧ್ಯಕ್ಷ ಅಯ್ಯಣ್ಣ ಹುಂಡೇಕಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಡಾ. ಸಿದ್ದಪ್ಪ ಹೊಟ್ಟಿ, ನಗರಸಭೆ ಸದಸ್ಯ ಅಂಬಯ್ಯ ಶಾಬಾದಿ ಸೇರಿದಂತೆ ವಿವಿಧ ಗಣೇಶ ಮಂಡಳಿಯ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT