ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಾಪನ ಅಧಿಕಾರಿ ಎಸಿಬಿ ಬಲೆಗೆ

Last Updated 10 ಫೆಬ್ರುವರಿ 2021, 1:25 IST
ಅಕ್ಷರ ಗಾತ್ರ

ಯಾದಗಿರಿ: ಭೂಮಾಪನ ಇಲಾಖೆಯ ಅಧಿಕಾರಿ ರಘುರಾಮ ಜಮೀನು ಅಳತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಜೀವ ಚವ್ಹಾಣ ಅವರಿಂದ ₹2 ಸಾವಿರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ಪಡೆಯ (ಎಸಿಬಿ) ಬಲೆಗೆ ಬಿದ್ದಿದ್ದಾರೆ.

ನಗರದ ಹೊಸಳ್ಳಿ ಕ್ರಾಸ್‌ ಹೋಟೆಲೊಂದರಲ್ಲಿ ₹2 ಸಾವಿರ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

‘ಜಮೀನು ಅಳತೆ ಮಾಡುವ ವಿಚಾರದಲ್ಲಿ ₹5 ಸಾವಿರ ಬೇಡಿಕೆ ಇಟ್ಟಿದ್ದರು. ಮೊದಲಿಗೆ ₹2 ಸಾವಿರ ಪಡೆಯಲು ಒಪ್ಪಿದ್ದರು. ಆದರಂತೆ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ’ ಎಂದು ಎಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸಿದರು.

ದಾಳಿ ವೇಳೆ ಎಸಿಬಿ ಜಿಲ್ಲಾ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ, ಡಿವೈಎಸ್ಪಿ ಉಮಾಶಂಕರ, ಇನ್‌ಸ್ಪೆಕ್ಟರ್‌ ಗುರುಪಾದ ಬಿರಾದಾರ,ಸಿಬ್ಬಂದಿ ಗುತ್ತಪ್ಪಗೌಡ, ವಿಜಯಕುಮಾರ, ಅಮರನಾಥ, ಪ್ರಕಾಶ ಮಾಳಿ, ರವಿ ಹಾಗೂ ಸಾಬಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT