ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಶಾಸಕ ಮುನಿರತ್ನ ರಾಜೀನಾಮೆ ಪಡೆಯಿರಿ‘

Published : 14 ಸೆಪ್ಟೆಂಬರ್ 2024, 15:31 IST
Last Updated : 14 ಸೆಪ್ಟೆಂಬರ್ 2024, 15:31 IST
ಫಾಲೋ ಮಾಡಿ
Comments

ಯಾದಗಿರಿ: ‘ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅಸಭ್ಯವಾಗಿ ಮಾತನಾಡಿದ್ದಲ್ಲದೇ ಜಾತಿನಿಂದನೆ ಮಾಡಿದ್ದು, ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿ ರಾಜೀನಾಮೆ ಪಡೆಯಬೇಕು’ ಎಂದು ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಜಗದೀಶ ಎನ್. ದಾಸನಕೇರಿ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಬಿಬಿಎಂಪಿ ಗುತ್ತಿಗೆದಾರನೊಂದಿಗೆ ಎಲ್ಲೆ ಮೀರಿ ಮಾತನಾಡಿರುವುದು, ಅಲ್ಲದೇ ಜಾತಿ ನಿಂದನೆ ಮಾಡಿ ಮಾತನಾಡಿರುವುದು ಅತ್ಯಂತ ಹೇಯ ಮತ್ತು ಅಕ್ಷಮ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಎಲ್ಲ ಜಾತಿ ಸಮುದಾಯದವರನ್ನು ಸಮನಾಗಿ ಕಾಣುತ್ತೇನೆ ಎಂದು ಆಣೆ ಪ್ರಮಾಣ ಮಾಡಿ ಇಂಥ ಕೀಳು ಪದಪ್ರಯೋಗ ಮತ್ತು ಜಾತಿ ನಿಂದನೆ ಮಾಡಿರುವುದು ಅತ್ಯಂತ ಶಿಕ್ಷಾರ್ಹ ಅಪರಾಧವಾಗಿದೆ. ತಕ್ಷಣ ಪ್ರಕರಣದ ಸಮಗ್ರ ತನಿಖೆ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT