ಭಾನುವಾರ, ಡಿಸೆಂಬರ್ 6, 2020
19 °C

‘ಪೌಷ್ಟಿಕ ಆಹಾರದಿಂದ ಉತ್ತಮ ಆರೋಗ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದರಿಂದ ಉತ್ತಮವಾದ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ’ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ ಹೇಳಿದರು.

ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎನ್‍ಎಸ್‍ಎಸ್ ಘಟಕ ಮತ್ತು ಯುನಿಸೇಫ್ ಸಹಯೋಗದಲ್ಲಿ ಏರ್ಪಡಿಸಿದ್ದ ಒಂದು ದಿನದ ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮ ಭಾಗದಲ್ಲಿ ಅಪೌಷ್ಟಿಕತೆಯಿಂದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೆಲ ವರ್ಷಗಳಿಂದ ಬಹಳಷ್ಟು ಮಕ್ಕಳು ಸಾವಿಗೀಡಾದ ಪ್ರಕರಣಗಳು ಜರುಗಿವೆ. ಇದನ್ನು ತಡೆಗಟ್ಟಲು ವಿಶೇಷವಾದ ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಅಪೌಷ್ಟಿಕತೆಯನ್ನು ನಿವಾರಿಸಿ ಮಕ್ಕಳಲ್ಲಿ ಉತ್ತಮ ಆರೋಗ್ಯ ಉಂಟಾಗುವಂತೆ ಮಾಡಲಾಗುತ್ತಿದೆ’ ಎಂದರು.

‘ಇಂದಿನ ಮಕ್ಕಳು ನಾಳಿನ ನಾಗರಿಕರು ಎನ್ನುವಂತೆ ದೇಶದ ಭವಿಷ್ಯ ರೂಪಿಸುವ ಮಕ್ಕಳು ಸದೃಢವಾದ ಆರೋಗ್ಯ ಹೊಂದಿದಲ್ಲಿ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದರು.

ಪ್ರಾಧ್ಯಾಪಕ ಡಾ.ಸರ್ವೋದಯ ಶಿವಪುತ್ರ ಮಾತನಾಡಿ, ‘ಎನ್‍ಎಸ್‍ಎಸ್ ಸ್ವಯಂ ಸೇವಕರು ತಮ್ಮ ಅಧ್ಯಯನದ ಜೊತೆಗೆ ಸಾಮಾಜಿಕ ಕಳಕಳಿಯ ಕೆಲಸ, ಕಾರ್ಯಗಳನ್ನು ಮಾಡುವಲ್ಲಿ ತೊಡಗಿಸಿಕೊಂಡರೆ ಅದು ದೇಶ ಸೇವೆ ಮಾಡಿದಂತಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಎನ್‍ಎಸ್‍ಎಸ್ ಚಟುವಟಿಕೆಗಳಲ್ಲಿ ಕ್ರೀಯಾಶೀಲವಾಗಿ ತೊಡಗಿಸಿಕೊಂಡು ಸೇವಾ ಯೋಜನೆಯ ಉದ್ದೇಶಗಳನ್ನು ಈಡೇರಿಸಬೇಕು’ ಎಂದರು.

ಡಾ.ಅಶೋಕರೆಡ್ಡಿ ಪಾಟೀಲ, ಶರಣಬಸ್ಸಪ್ಪ ರಾಯಕೋಟಿ, ಡಾ.ಜೆಟ್ಟಪ್ಪ ಡಿ., ಬಿ.ಆರ್.ಕೇತನಕರ್, ಡಾ.ಬಿ.ಎಸ್.ಸಿಂಗೆ ಇದ್ದರು. ಡಾ.ಚಂದ್ರಶೇಖರ ಕೊಂಕಲ್ ಸ್ವಾಗತಿಸಿದರು. ರಾಘವೇಂದ್ರ ಬಂಡಿಮನಿ ನಿರೂಪಿಸಿ, ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು