ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗದಿಂದ ಉತ್ತಮ ಆರೋಗ್ಯ: ಅನಿಲ ಗೂರುಜಿ

ವಿದ್ಯಾವರ್ಧಕ ಪ್ರೌಢ ಶಾಲೆಯಲ್ಲಿ ಯೋಗ ಕಾರ್ಯಕ್ರಮ
Last Updated 28 ನವೆಂಬರ್ 2021, 8:47 IST
ಅಕ್ಷರ ಗಾತ್ರ

ಸೈದಾಪುರ: 'ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದ್ದು, ಎಲ್ಲರೂ ನಿತ್ಯ ಯೋಗ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಜಿಲ್ಲಾ ಪತಂಜಲಿ ಯೋಗ ಸಮಿತಿಯ ಪ್ರಬಾರಿ ಅನಿಲ ಗೂರುಜಿ ಹೇಳಿದರು.

ಪಟ್ಟಣದ ವಿದ್ಯಾವರ್ಧಕ ಪ್ರೌಢ ಶಾಲೆಯಲ್ಲಿ ಫಿಟ್ ಇಂಡಿಯಾ ಶಾಲಾ ಸಪ್ತಾಹ ಪ್ರಯುಕ್ತ ಆಯೋಜಿಸಿದ ಯೋಗ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಯೋಗವು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುತ್ತದೆ. ನಮಲ್ಲಿ ಕಾಣಿಸಿಕೊಳ್ಳುವ ಹಲವು ರೋಗಗಳಿಗೆ ಪರಿಹಾರವನ್ನೂ ಕಂಡುಕೊಳ್ಳಬಹುದು. ಆಧುನಿಕ ಒತ್ತಡದ ಬದುಕಿನಲ್ಲಿ ಬಹುತೇಕರಿಗೆ ಜೀವನವೇ ಸಾಕು ಎಂಬ ಭಾವ ಮೂಡುತ್ತಿದೆ. ಯೋಗ ಈ ಎಲ್ಲ ಒತ್ತಡಗಳನ್ನು ತಡೆದು ಮನಸ್ಸನ್ನು ಪ್ರಶಾಂತಗೊಳಿಸುತ್ತದೆ. ರೋಗ ಮುಕ್ತ, ಸ್ವಸ್ಥ-ಸುಸ್ಥಿರ ಸಮಾಜ ನಿರ್ಮಾಣಕ್ಕೆ ಯೋಗ ಅತ್ಯವಶ್ಯಕ’ ಎಂದರು.

ವಿಶ್ವದ ಹಲವು ರಾಷ್ಟ್ರಗಳು ಯೋಗದ ಮೊರೆ ಹೋಗುತ್ತಿವೆ. ಇದು ದೇಹವನ್ನು ಸಮತೂಕದಲ್ಲಿ ಇರಿಸುತ್ತದೆ. ಶಾಂತಿ ಕಾಪಾಡಿಕೊಳ್ಳಲು ಯೋಗ ಅತ್ಯುತ್ತಮ ಮಾರ್ಗವಾಗಿದೆ ಎಂದರು.

ಮುಖ್ಯಶಿಕ್ಷಕಲಿಂಗಾರೆಡ್ಡಿ ನಾಯಕ ಮಾತನಾಡಿ, ಫಿಟ್ ಇಂಡಿಯಾ ಸಪ್ತಾಹದ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ. ಪತಂಜಲಿ ಯೋಗ ಸಮಿತಿಯ ತಂಡವು ಮಕ್ಕಳಿಗೆ ಯೋಗದ ಮಹತ್ವ ತಿಳಿಸಿದ್ದಾರೆ ಎಂದರು.

ಮುನಿಯಪ್ಪ ಬಾವಿಕಟ್ಟಿ, ವೆಂಕಟೇಶ ಕುಲ್ಕರ್ಣಿ, ಪ್ರಭು ಬಳಿಚಕ್ರ, ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥರೆಡ್ಡಿ ಪಾಟೀಲ ಕಣೇಕಲ, ಪ್ರಾಂಶುಪಾಲ ಜಿ.ಎಂ.ಗುರುಪ್ರಸಾದ, ಹಂಪಣ್ಣ ಸಜ್ಜನಶೆಟ್ಟಿ, ಕರಬಸಯ್ಯ ದಂಡಿಗಿಮಠ, ಗೂಳಪ್ಪ.ಎಸ್.ಮಲ್ಹಾರ, ರಾಚಯ್ಯ ಸ್ವಾಮಿ ಬಾಡಿಯಾಲ, ಕಾಶಿನಾಥ ಶೇಖಸಿಂದಿ, ಸತೀಶ ಪುರ್ಮಾ, ಶಿವಕುಮಾರ ಬಂಡಿ, ಭೀಮಣ್ಣ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT