ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರದ ಯೋಜನೆಗಳು ಪೂರಕ: ಡಾ.ರಾಗಪ್ರಿಯಾ

ಯಾದಗಿರಿ: ಸರ್ಕಾರ ಜಾರಿಗೆ ತಂದಿರುವ ಹಲವು ಯೋಜನೆಗಳ ಲಾಭ ಪಡೆದು ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಕರೆ ನೀಡಿದರು.
ನಗರದ ಬಾಲಾಜಿ ಕಲ್ಯಾಣ ಮಂಟಪದ ಹತ್ತಿರವಿರುವ ಕಲಿಕಾ ಟ್ರಸ್ಟ್‌ಗೆ ಶುಕ್ರವಾರ ಭೇಟಿ ನೀಡಿ ಲಂಬಾಣಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸುತ್ತಿರುವ ವಿವಿಧ ಕರಕುಶಲ ವಸ್ತು ಪ್ರದರ್ಶನ ವೀಕ್ಷಿಸಿ ಮಾತನಾಡಿದರು.
ಮಹಿಳೆಯರ ಏಳಿಗೆಗೆ ಸರ್ಕಾರ ರೂಪಿಸಿರುವ ಯೋಜನೆಗಳು ಪೂರಕವಾಗಿವೆ. ವಿವಿಧ ಯೋಜನೆಗಳ ಕುರಿತು ತರಬೇತಿ ಪಡೆದು, ಆ ಮೂಲಕ ಆರ್ಥಿಕವಾಗಿ ಬಲಾಢ್ಯರಾಗಬೇಕು. ಅದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.
ಕರಕುಶಲ ವಸ್ತುಗಳಾದ ಲಂಬಾಣಿ ಉಡುಪು, ಮಾಸ್ಕ್, ಕೈಚೀಲ, ಕೈಯಿಂದ ತಯಾರಿಸಿದ ಸರಗಳು ಸೇರಿದಂತೆ ಇನ್ನಿತರೆ ವಸ್ತುಗಳನ್ನು ವೀಕ್ಷಿಸಿ, ಸಂತಸ ವ್ಯಕ್ತಪಡಿಸಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಮ್ಯಾಗೇರಿ, ಟಾಟಾ ಟ್ರಸ್ಟ್ ಕಲಿಕೆ ಸಂಸ್ಥೆಯ ನಿರ್ದೇಶಕ ಗಿರೀಶ, ಪ್ರಮಿಳಾ, ಸಾಯಿಬಾಬ, ಮಯೂರ ಪೂಜಾರಿ, ಜಿಲ್ಲಾ ಮಹತ್ವಾಕಾಂಕ್ಷೆ ಸಮಾಲೋಚಕರು ಸೇರಿದಂತೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.