ಶಹಾಪುರ: ಶ್ರೀಶೈಲ ಜಗದ್ಗುರುಗಳು ಫೇಸ್‌ಬುಕ್‌ನಲ್ಲಿ ‘ಮತಾಂತರಿಗಳ ವಿರುದ್ಧ ಕಠಿಣ ಕಾನೂನು ಜಾರಿ ಅಗತ್ಯ’ ಎಂದು ಹೇಳಿಕೆ ನೀಡಿದ್ದಕ್ಕೆ ಅವಾಚ್ಯ ಶಬ್ಧಗಳ ಮೂಲಕ ಪ್ರತಿಕ್ರಿಯೆ ನೀಡಿದ್ದ ನಗರದ ಶಿಕ್ಷಕ ಸಾಜಿದ್ ಹುಸೇನ್ ಸುಲೇದಾರ್ ಅವರನ್ನು ಭಾನುವಾರ ಶಹಾಪುರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಶನಿವಾರ ನಗರದ ವೀರಶೈವ ಲಿಂಗಾಯತ ಮತ್ತು ಬೇಡ ಜಂಗಮ ಸಮಾಜದ ಯುವ ಮುಖಂಡರು ಠಾಣೆಗೆ ತೆರಳಿ ಶಿಕ್ಷಕನ್ನು ಬಂಧಿಸುವಂತೆ ದೂರು ಸಲ್ಲಿಸಿದ್ದರು. ಅಲ್ಲದೆ ನಗರದ ಸರ್ಕಾರಿ ಕನ್ಯಾ ಪ್ರೌಢ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ಸಾಜಿದ್ ಹುಸೇನ್ ಸುಲೇದಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವೀರಶೈವ ಲಿಂಗಾಯತ ಯುವ ಘಟಕದ ಅಧ್ಯಕ್ಷ ಶಂಭುಲಿಂಗ ಗೋಗಿ ನಗರ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.