ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂದೋಲಶ್ರೀ ಪ್ರಕರಣ: ಶ್ರೀರಾಮಸೇನೆ ಖಂಡನೆ

Published 6 ಅಕ್ಟೋಬರ್ 2023, 15:53 IST
Last Updated 6 ಅಕ್ಟೋಬರ್ 2023, 15:53 IST
ಅಕ್ಷರ ಗಾತ್ರ

ಯಾದಗಿರಿ: ಶಹಾಪುರದಲ್ಲಿ ಈಚೆಗೆ ನಡೆದ ಗಣಪತಿ ವಿರ್ಸಜನೆ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿಯ ಆಂದೋಲ ಸಿದ್ದಲಿಂಗ ಸ್ವಾಮೀಜಿ ಮಾತನಾಡಿರುವ ವಿಡಿಯೋ ಇಟ್ಟಕೊಂಡು  ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಮೂಲಕ ವಾಕ್ ಸ್ವಾತಂತ್ರ‍್ಯ ಕಸಿದುಕೊಳ್ಳುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಕಲ್ಯಾಣ ಕರ್ನಾಟಕ ಅಧ್ಯಕ್ಷ ವಿಜಯ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ‘ರಾಜ್ಯದಲ್ಲಿ ಒಂದು ಕೋಮಿನ ತುಷ್ಟೀಕರಣದ ಭಾಗವಾಗಿ ಶ್ರೀಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದು ತೀವ್ರ ಖಂಡನೀಯ ಎಂದಿದ್ದಾರೆ.

‘ಕಾಂಗ್ರೆಸ್ ಸರ್ಕಾರದ ಹಿಂದೂಗಳ ದಮನಕಾರಿ ನೀತಿ ಸರಿಯಲ್ಲ. ಶ್ರೀಗಳ ವಿರುದ್ಧ ಪ್ರಕರಣ ದಾಖಲಿಸಿದ್ದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT