ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆ: ಮತದಾರರಲ್ಲಿ ಜಾಗೃತಿ ಮೂಡಿಸಲು ಸಲಹೆ

Last Updated 10 ಡಿಸೆಂಬರ್ 2020, 5:13 IST
ಅಕ್ಷರ ಗಾತ್ರ

ಯಾದಗಿರಿ: ಎರಡು ಹಂತಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೊಠಡಿಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ನೂತನ ಮತದಾರರ ನೋಂದಣಿ ಕುರಿತಂತೆ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ 119 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಡಿ.22 ಹಾಗೂ ಡಿ.27ರಂದು ಮತದಾನ ನಡೆಯಲಿದೆ. ಈ ಬಾರಿ ಅತಿ ಹೆಚ್ಚು ಮತದಾನವಾಗಬೇಕು. ಮತದಾರರಲ್ಲಿ ಜಾಗೃತಿ ಮೂಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಂಗೋಲಿ ಸ್ಪರ್ಧೆ, ಕ್ಯಾಂಡಲ್ ಮಾರ್ಚ್ ಸೇರಿದಂತೆ ವಿವಿಧ ರೀತಿಯ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ವಿಜೇತರಾದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ವಿವಿಧ ರೀತಿಯ ಆಟೋಟಗಳ ಸ್ಪರ್ಧೆಗಳು, ಬೀದಿ ನಾಟಕ ಹಾಗೂ ಜಾನಪದ ಸಂಗೀತ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅತಿ ಹೆಚ್ಚು ಮತದಾರರ ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸರೆಡ್ಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ, ರಾಜು ಭಾವಿಹಳ್ಳಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT