ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆಯಾದ ಗ್ರಾಮ ಪಂಚಾಯಿತಿ ಸದಸ್ಯರು

ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಕಂದಕೂರ
Last Updated 23 ಜೂನ್ 2021, 16:54 IST
ಅಕ್ಷರ ಗಾತ್ರ

ಯಾದಗಿರಿ: ನಗರದಲ್ಲಿರುವ ಶಾಸಕ ನಾಗನಗೌಡ ಕಂದಕೂರ ಅವರ ಜನಸಂಪರ್ಕ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹತ್ತಿಕುಣಿ ಗ್ರಾಮ ಪಂಚಾಯಿತಿ ಸದಸ್ಯ ಕ್ಷೀರಲಿಂಗ ಗಣಪುರ, ದೇವಪ್ಪ ಹೋರುಂಚಾ ಸೇರಿದಂತೆ 25ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರುಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷಕ್ಕೆ ಬರಮಾಡಿಕೊಂಡ ರಾಜ್ಯ ಜೆಡಿಎಸ್ ಪಕ್ಷದ ಯುವ ಮುಖಂಡ ಶರಣಗೌಡ ಕಂದಕೂರ ಮಾತನಾಡಿ, ಹತ್ತಿಕುಣಿ ಗ್ರಾಮ ಪಂಚಾಯಿತಿಯ ಬಿಜೆಪಿ ಬೆಂಬಲಿತ ಹಾಲಿ ಇಬ್ಬರು ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜೆಡಿಎಸ್‍ಗೆ ಸೇರ್ಪಡೆಗೊಂಡಿರುವುದರಿಂದ ಆ ಭಾಗದಲ್ಲಿ ಪಕ್ಷ ಸಂಘಟನೆಗೆ ಶಕ್ತಿ ತುಂಬಿದಂತಾಗಿದೆ ಎಂದು ಹೇಳಿದರು.

ವಾಮ ಮಾರ್ಗದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಮತಕ್ಷೇತ್ರಕ್ಕೆ ಮಂಜೂರಾದ ಅನುದಾನ ಕಡಿತಗೊಳಿಸಿದೆ. ಆದರೂ ದೃತಿಗೆಡದೆ ಜನರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ, ಕ್ರೀಯಾಶಿಲವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರ ಅವಧಿಯಲ್ಲಿ ಗುರುಮಠಕಲ್ ಮತಕ್ಷೇತ್ರಕ್ಕೆ ಶಾಸಕ ಕಂದಕೂರ ನಿರೀಕ್ಷೆಗೆ ಮೀರಿ ಹೆಚ್ಚಿನ ಅನುದಾನ ತರುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನಿಸಿದ್ದಾರೆ ಎಂದು ತಿಳಿಸಿದರು.

‘ಕಳೆದ ಒಂದು ವರ್ಷದಿಂದ ಕೊರೊನಾ ಸೋಂಕು ದಾಳಿಯಿಂದ ಜನರು ಸಂಕಷ್ಟದಲ್ಲಿದ್ದಾರೆ. ನಮ್ಮ ಯುವಕರ ತಂಡ ಯೋಜನಾಬದ್ಧವಾಗಿ ಅವರ ಸಮಸ್ಯೆಗಳಿಗೆ ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದಾರೆ. ಜೊತೆಗೆ ನಾನು ವೈಯಕ್ತಿಕವಾಗಿ ಸಂಕಷ್ಟ ಎದುರಿಸುತ್ತಿರುವ ಹಲವಾರು ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡಿದ್ದೇನೆ‘ ಎಂದು ತಿಳಿಸಿದರು.

‘ಒಂದು ವಾರದಿಂದ ಗುರುಮಠಕಲ್ ಮತ ಕ್ಷೇತ್ರದ ಎಲ್ಲಾ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಹಾಗೂ ತಾಂಡಾಗಳಿಗೆ ಖುದ್ದಾಗಿ ಭೇಟಿ ನೀಡಿ ನೇರವಾಗಿ ಜನರನ್ನು ಭೇಟಿಯಾಗಿ ಅವರ ವಾರ್ಡ್‌ಗಳಲ್ಲಿರುವ ಸಮಸ್ಯೆಗಳನ್ನು ತಿಳಿದುಕೊಂಡು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಹಾರಕ್ಕೆ ಯತ್ನಿಸಿದ್ದೇನೆ‘ ಎಂದರು.

ಮುಖಂಡರಾದ ಅಜೆಯರೆಡ್ಡಿ ಎಲ್ಹೇರಿ, ಮಹೇಂದ್ರರೆಡ್ಡಿ ಕಂದಕೂರ, ಅನಿಲಕುಮಾರ ಹೆಡಗಿಮದ್ರಿ, ರವಿಗೌಡ ಮಾಲಿಪಾಟೀಲ ಹತ್ತಿಕುಣಿ, ಚಂದ್ರಾರೆಡ್ಡಿ ದಳಪತಿ, ಹಣಮಂತ ನಾಯಕ, ನಾಗರಾಜ ದೇಶಮುಖ, ಸುಭಾಷ ನಾಯಕ್, ಶಾಂತು ಸಾಹುಕಾರ ಕೊಟಗೇರಾ, ಮಲ್ಲುಗೌಡ ಹೊಸಳ್ಳಿ, ಹತ್ತಿಕುಣಿ ಗ್ರಾಮದ ಮಲ್ಲು ಗೌಡಗೇರಾ, ಕಲ್ಲಪ್ಪ ಕಲಪ್ಪನೋರ್, ಭೀಮರಾಯ ಹೊಸಳ್ಳಿ, ದೇವಪ್ಪ, ಸಾಬಣ್ಣ ಜಿನಕೇರಾ, ಮಲ್ಲಿಕಾರ್ಜುನ, ಯಲ್ಲಪ್ಪ ತಾತಳಗೇರಾ, ಹಣಮಂತ ಗಣಪೂರ, ಮಲ್ಲಪ್ಪ ಕವಲ್ದಾರ್, ಬಸವರಾಜ ವರ್ಕನಳ್ಳಿ ಮತ್ತು ರಡ್ಡೆಪ್ಪ ಗಣಪುರ ಸೇರಿದಂತೆ 25ಕ್ಕೂ ಹೆಚ್ಚು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT