ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅರಸು ನಾಡು ಕಂಡ ಶ್ರೇಷ್ಠ ಸಿಎಂ’

ಜಿಲ್ಲಾಡಳಿತದಿಂದ ಡಿ.ದೇವರಾಜ ಅರಸು 104ನೇ ಜಯಂತ್ಯುತ್ಸವ
Last Updated 20 ಆಗಸ್ಟ್ 2019, 15:19 IST
ಅಕ್ಷರ ಗಾತ್ರ

ಯಾದಗಿರಿ: ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರು ನಾಡು ಕಂಡ ಶ್ರೇಷ್ಠ ಮುಖ್ಯಮಂತ್ರಿ ಆಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು 104ನೇ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

ಅರಸು ಅವರನ್ನು ಇಂದಿನ ರಾಜಕಾರಣಿಗಳು ಮಾದರಿಯಾಗಿಟ್ಟುಕೊಂಡು ಕಾರ್ಯ ನಿರ್ವಹಿಸಿದರೆ ರಾಜ್ಯವು ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಮತ್ತು ಆದರ್ಶ ರಾಜ್ಯವನ್ನಾಗಿಸಲು ಸಾಧ್ಯ ಎಂದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿ, ಡಿ.ದೇವರಾಜ ಅರಸು ಹಿಂದುಳಿದವರು ಮತ್ತು ಬಡವರಿಗಾಗಿ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದಾರೆ. ಪ್ರಮುಖವಾಗಿ ಅವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟು, ವಸತಿನಿಲಯ, ವಸತಿ ಶಾಲೆಗಳನ್ನು ಆರಂಭಿಸಿದರು. ಅವರ ಕನಸು ನನಸಾಗಬೇಕಾದರೆ ಜಿಲ್ಲೆಯು ಶೈಕ್ಷಣಿಕವಾಗಿ ಉನ್ನತಿ ಸಾಧಿಸಬೇಕಿದೆ ಎಂದು ಹೇಳಿದರು.

ಬಿಆರ್‌ಪಿ ಮಲ್ಲಿಕಾರ್ಜುನ ಪೂಜಾರಿ ಉಪನ್ಯಾಸ ನೀಡಿ, ದಿ.ಡಿ.ದೇವರಾಜ ಅರಸು 2 ಬಾರಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಬಡತನ, ಜೀತ ಪದ್ಧತಿ ನಿರ್ಮೂಲನೆಗೆ ಮತ್ತು ಶೋಷಿತರ ಶ್ರಯೋಭಿವೃದ್ಧಿಗಾಗಿ ಶ್ರಮಿಸಿದರು. 40 ಸಾವಿರ ಕೃಷಿ ಕಾರ್ಮಿಕರಿಗೆ ಭೂಮಿ ಹಂಚಿಕೆ, 65 ಸಾವಿರ ಜನರ ಜೀತಮುಕ್ತಿ, 1600 ನಿರುದ್ಯೋಗಿಗಳಿಗೆ ಉದ್ಯೋಗ, 31 ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣ, ಭಿಕ್ಷುಕರಿಗೆ ಪುನರ್ವಸತಿ ಕಲ್ಪಿಸಿರುವುದು ಅರಸು ಅವರ ಸಾಧನೆಯಾಗಿದೆ. 1973ರಲ್ಲಿ ಮೈಸೂರು ರಾಜ್ಯಕ್ಕೆ ‘ಅಖಂಡ ಕರ್ನಾಟಕ’ ಎಂದು ನಾಮಕರಣ ಮಾಡಿದ ಕೀರ್ತಿ ಡಿ.ದೇವರಾಜ ಅರಸು ಅವರದು ಎಂದು ವಿವರಿಸಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ಕ್ರೀಡೆ, ನಿಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಸತಿನಿಲಯಗಳ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಹೆಚ್ಚವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಡಿವೈಎಸ್‍ಪಿ ಯು.ಶರಣಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಶಿವಲಿಂಗಪ್ಪ ಪುಟಗಿ, ಕೋಲಿ ಸಮಾಜದ ಮುಖಂಡ ಮೌಲಾಲಿ ಅನಪೂರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವೈ.ಬಸವರಾಜ ಇದ್ದರು.

ಲಿಂಗೇರಿ ಸ್ಟೇಷನ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಹಾಗೂ ಕಲಾವಿದ ವಿಥೇಶ್‍ಕುಮಾರ ನಾಡಗೀತೆ ಹಾಡಿದರು.

ಶ್ರೀನಿವಾಸ ಸಣ್ಣಸಂಬರ ತಬಲಾ ಸಾಥ್ ನೀಡಿದರು.

ಪ್ರಾಂಶುಪಾಲ ಸುರೇಶ ತಡಿಬಿಡಿ ಸ್ವಾಗತಿಸಿದರು. ಉಪನ್ಯಾಸಕಿ ಡಾ.ಜ್ಯೋತಿಲತಾ ತಡಿಬಿಡಿಮಠ ‌ನಿರೂಪಿಸಿದರು. ಪ್ರಾಂಶುಪಾಲ ಗಾಳೆಪ್ಪ ಪೂಜಾರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT