ಗುರುವಾರ , ಜೂನ್ 30, 2022
23 °C

ಸಾವೂರು: ದಿನಸಿ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೈದಾಪುರ: ಸಮೀಪದ ಸಾವೂರು ಗ್ರಾಮದಲ್ಲಿ ಕೂಲಿ ಕಾರ್ಮಿಕರು, ಬಡವರು ಮತ್ತು ನಿರ್ಗತಿಕರಿಗೆ ಅಜೀಂ ಪ್ರೇಮ್‍ಜಿ ಸಂಸ್ಥೆಯ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

ಈ ವೇಳೆ ಗ್ರಾ.ಪಂ ಸದಸ್ಯ ಮಲ್ಲು ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯುವ ಉದ್ದೇಶದಿಂದ ಸರ್ಕಾರ ಲಾಕ್‍ಡೌನ್ ಘೋಷಣೆ ಮಾಡಿದೆ. ಇದರಿಂದ ನಮ್ಮಂತಹ ಬಡ ವರ್ಗದವರಿಗೆ ಒಂದೊಂತ್ತಿನ ಊಟಕ್ಕೂ ಪರದಡಾವಂತಾಗಿದೆ. ಇಂತಹ ಸಂದರ್ಭದಲ್ಲಿ ಈ ಸಂಸ್ಥೆಯವರು ಮನೆ ಬಾಗಿಲಿಗೆ ಬಂದು ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.

ನಂತರ ಎಪಿಎಫ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಆರ್ ಚಿಲಾಮಣಿ ಮಾತನಾಡಿದರು.

ಗ್ರಾ.ಪಂ ಸದಸ್ಯ ಮಲ್ಲು, ನಾಗರಾಜ, ಭಾಸ್ಕರ, ಎಸ್‍ಡಿಎಂಸಿ ಅಧ್ಯಕ್ಷ ಅಬ್ಬಾಯ್ಯ, ಶೇಖರ, ಸೇರಿದಂತೆ ಇತರರು ಇದ್ದರು.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.