ಯಾದಗಿರಿ: ಗ್ರಾಮೀಣ ಮಟ್ಟದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಅಧಿಕಾರಿಗಳಲ್ಲಿ ಸೇವಾ ಮನೋಭಾವ ಇರಬೇಕು. ಸಮಾಜದಲ್ಲಿ ಇನ್ನೂ ಅನೇಕರು ಅಗತ್ಯ ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಸವರಾಜ ಬಾಗ್ಲಿ ಸೂಚಿಸಿದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸೌಲಭ್ಯ ವಂಚಿತ ಫಲಾನುಭವಿಗಳ ಮನೆ ಮನೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಮುಂದಿನ ದಿನಗಳಲ್ಲಿ ಬಡ ಜನರ ಮನೆಯ ಬಾಗಿಲಿಗೆ ಮುಟ್ಟಿಸುವ ಕೆಲಸ ತಾಲ್ಲೂಕು ಮಟ್ಟದ ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯಗಳು ಕಡಿತ ಮಾಡಿಕೊಳ್ಳುತ್ತಿದ್ದು, ತಾವುಗಳು ಪ್ರತಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ಇನ್ನೂಳಿದ ಫಲಾನುಭವಿಗಳ ಮನೆಗೆ ಭೇಟಿ ನೀಡಿ ದಾಖಲಾತಿಗಳನ್ನು ಸರಿಪಡಿಸಿಕೊಂಡು ಮುಂದಿನ ತಿಂಗಳಿನಿಂದ ಅವರಿಗೆ ಸೌಲಭ್ಯ ದೊರಕುವಂತೆ ಮಾಡಬೇಕು ಎಂದು ಹೇಳಿದರು.

ಯುವನಿಧಿ 2022-23 ಮತ್ತು 2023-24 ನೇ ಸಾಲಿನಲ್ಲಿ ಉತ್ತಿರ್ಣರಾದ ಡಿಪ್ಲೋಮಾ ಹಾಗೂ ಪದವೀಧರರಿಗೆ ಆರು ತಿಂಗಳವರೆಗೆ ಯಾವುದೇ ಸರ್ಕಾರಿ ಅರೆ ಸರ್ಕಾರಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ವ್ಯಾಪಾರ ವಹಿವಾಟು ಮಾಡದೆ ಇರುವ ಪದವೀಧರರಿಗೆ ಡಿಪ್ಲೋಮಾ ₹1,500 ಹಾಗೂ ಪದವೀಧರರಿಗೆ ₹3,000 ನೀಡಲಾಗುವುದು. ಪ್ರಸ್ತುತ ಜಿಲ್ಲೆಯಲ್ಲಿ 1,652 ಜನರಿಗೆ ಈ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಮಹಿಳೆಯರು ರಾಜ್ಯದ ಮೂಲೆ-ಮೂಲೆಗಳಿಗೆ ಉಚಿತ ಪ್ರವಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿನಿಯರೂ ಸೇರಿದಂತೆ ಎಲ್ಲ ವರ್ಗಗಳ ಮಹಿಳೆಯರಿಗೆ ಅಂತರ್ ರಾಜ್ಯ ಸಾರಿಗೆ ಬಸ್, ಎಸಿ ಹಾಗೂ ಲಕ್ಷುರಿ ಬಸ್ಗಳನ್ನು ಹೊರತುಪಡಿಸಿ ಇತರ ಎಲ್ಲ ಬಸ್ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ನೀಡಿದ್ದು, ಆಧಾರ್ ಕಾರ್ಡ್ ತೋರಿಸಿ ಮಹಿಳಾ ಪ್ರಯಾಣಿಕರು ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕ್ರಮವಹಿಸಿ ಎಂದು ಸಾರಿಗೆ ಇಲಾಖೆಯ ಅಧಿಕಾರಿಗೆ ನಿರ್ದೇಶಿಸಿದರು.

ಬಸ್ ನಿರ್ವಾಹಕರು ಹಾಗೂ ಚಾಲಕರು ಮಹಿಳಾ ಪ್ರಯಾಣಿಕರನ್ನು ಗೌರವದಿಂದ ನೋಡಿಕೊಳ್ಳಲು ಇದೇ ವೇಳೆ ಅಧ್ಯಕ್ಷರು ಹಾಗೂ ಸದಸ್ಯರು ಅಧಿಕಾರಿಗಳಿಗೆ ಸೂಚಿಸಿದರು.

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಯಾವ ಕಾರಣಕ್ಕಾಗಿ ಸೌಲಭ್ಯ ದಕ್ಕುತ್ತಿಲ್ಲದ ಫಲಾನುಭವಿಗಳ ಮನೆಗೆ ಭೇಟಿ ನೀಡಿ ದಾಖಲಾತಿಗಳನ್ನು ತೆಗೆದುಕೊಂಡು ಮುಂದಿನ ದಿನಗಳಲ್ಲಿ ಸೌಲಭ್ಯಗಳು ಸಿಗುವಂತೆ ಮಾಡಬೇಕು ಎಂದು ಸಭೆಯಲ್ಲಿ ಪ್ರಾಸ್ತಾಪ ಆಗಿರುವ ಎಲ್ಲ ಸಮಸ್ಯೆಗಳಿಗೆ ಮುಂದಿನ ಸಭೆ ಹೊತ್ತಿಗೆ ಸಂಪೂರ್ಣ ಮಾಹಿತಿಯೊಂದಿಗೆ ಪ್ರತಿ ಇಲಾಖಾ ಅಧಿಕಾರಿಗಳು ಹಾಜರಾಗುವಂತೆ ಸೂಚಿಸಿದರು.

ಈ ವೇಳೆ ಯಾದಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಬಾಬಳಗಿ, ವ್ಯವಸ್ಥಾಪಕ ಶಿವರಾಯ ಗುಂಡಗುರ್ತಿ, ಐದು ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಸದಸ್ಯರು ಹಾಗೂ ಐದು ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು
ಬಸವರಾಜ ಬಾಗ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ

‘ವಿದ್ಯುತ್ ಸೋರಿಕೆ ತಡೆಯಿರಿ’

ಸರ್ಕಾರ ಗೃಹಜ್ಯೋತಿ ಯೋಜನೆಯಡಿ ನೀಡಿದ 200 ಯುನಿಟ್ ಮಿತಿಯೊಳಗೆ ವಿದ್ಯುತ್ ಬಳಕೆ ಮಾಡುವ ಗ್ರಾಹಕರ ಸಂಖ್ಯೆ ಹೆಚ್ಚಿರುವುದರಿಂದ ಪ್ರತಿ ಮನೆಗೂ ಮೀಟರ್ ಅಳವಡಿಕೆ ಮಾಡಿಕೊಳ್ಳುವಂತೆ ಗ್ರಾಹಕರಿಗೆ ಮನವರಿಕೆ ಮಾಡುವ ಮೂಲಕ ವಿದ್ಯುತ್ ಸೋರಿಕೆ ತಡೆಯಬಹುದು ಎಂದು ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಬಸವರಾಜ ಬಾಗ್ಲಿ ಸೂಚಿಸಿದರು. ಪಡಿತರ ಚೀಟಿ ನೋಂದಣಿ ನಿಯಮಾನುಸಾರ ನೋಂದಣಿಯಾಗಬೇಕು. ಪಾರದರ್ಶಕವಾಗಿ ನೋಂದಣಿ ಮಾಡಿಕೊಳ್ಳಬೇಕು. ಸರ್ಕಾರದ ಬೇರೆ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಈ ಪಡಿತರ ಚೀಟಿಯನ್ನೆ ಕುಟುಂಬ ಎಂದು ಗುರುತಿಸಿ ಸೌಲಭ್ಯ ಪಡೆಯಲಾಗುವುದು. ಎಲ್ಲಾ ಪಡಿತರ ಚೀಟಿ ಹೊಂದಿದ ಫಲಾನುಭವಿಗಳಿಗೆ 10 ಕೆ.ಜಿ ಅಕ್ಕಿಯ ಪಡಿಯುತ್ತಿದಾರೆ ಎಂದು ಇಲಾಖಾ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.