ಯಾದಗಿರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಎಲ್ಇಡಿ ಪರದೆಯ ಸಂಚಾರ ವಾಹನಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಗುರುವಾರ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.

‘ಜನರ ಜೀವನಮಟ್ಟ ಸುಧಾರಣೆಗಾಗಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಬಗ್ಗೆ ಎಲ್ಇಡಿ ವಾಹನ ಹಾಗೂ ಬೀದಿ ನಾಟಕ ತಂಡಗಳು ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.

‘ಸರ್ಕಾರದ ಯೋಜನೆಗಳ ಲಾಭ ನೇರವಾಗಿ ಜನರಿಗೆ ತಲುಪಬೇಕೆಂಬ ಉದ್ದೇಶದಿಂದ ಎಲ್ಇಡಿ ವಾಹನದ ಮೂಲಕ ಅರಿವು ಮೂಡಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗಪಡೆಯಬೇ’ ಎಂದು ಹೇಳಿದರು.

‘ಈ ವಾಹನಗಳು ಜಿಲ್ಲೆಯ ಯಾದಗಿರಿ ಹಾಗೂ ಗುರುಮಠಕಲ್ ತಾಲ್ಲೂಕಿನ ತಲಾ 10 ಗ್ರಾಮಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ. ಬೀದಿ ನಾಟಕ ತಂಡಗಳು ದಿನಕ್ಕೆ ಎರಡರಂತೆ ನಾಟಕಗಳ ಮೂಲಕ ಅರಿವು ಮೂಡಿಸಲಿವೆ. ಅದರಂತೆ ಎಲ್ಇಡಿ ಮೂಲಕವು ಜನರಿಗೆ ಯೋಜನೆಗಳ ವನವರಿಕೆ ಮಾಡಲಾಗುತ್ತದೆ’ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು ಸುಲೈಮಾನ ಡಿ.ನದಾಫ್, ಬೆರಳಚ್ಚುಗಾರ ಭೀಮಣ್ಣ ನಾಯಕ, ಸಿಬ್ಬಂದಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.