ಗುರುಮಠಕಲ್ (ಯಾದಗಿರಿ ಜಿಲ್ಲೆ): ಅನುಮತಿ ಸಿಗದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶನಿವಾರ (ಅ.25) ನಡೆಯಬೇಕಿದ್ದ ಆರ್ಎಸ್ಎಸ್ ಪಥಸಂಚಲನ ಮುಂದೂಡಲಾಗಿದೆ.

ಅನುಮತಿ ಕೋರಿ ಆಯೋಜಕರು ಅ.21ರಂದು ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದ್ದರು. ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಗುರುವಾರ ತಹಶೀಲ್ದಾರ್ ಕಚೇರಿಗೆ ತೆರಳಿದ್ದ ಆಯೋಜಕರಿಗೆ, ‘ನನಗೆ ಅನುಮತಿ ನೀಡುವ ಅಧಿಕಾರ ಇಲ್ಲ’ ಎಂದು ತಹಶೀಲ್ದಾರ್ ಸ್ಪಷ್ಟನೆ ಕೊಟ್ಟು ಕಳುಹಿಸಿದ್ದರು.

ಅದೇ ದಿನ ಆಯೋಜಕರು ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ತರಾತುರಿಯಲ್ಲಿ ಅನುಮತಿ ನೀಡಲಾಗದು. ಮತ್ತೊಂದು ದಿನ ನಿಗದಿಗೊಳಿಸಿ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದರು.

‘ಸುತ್ತೋಲೆ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ಪಡೆಯಬೇಕು. ಅನುಮತಿ ಸಿಗದೆ ಇದ್ದರೆ ತಿರಸ್ಕೃತ ಆಗುತ್ತದೆ. ಆಯೋಜಕರ ಮತ್ತೊಂದು ಅರ್ಜಿ ಪರಿಶೀಲನೆ ಹಂತದಲ್ಲಿದೆ. ಎಲ್ಲವೂ ಸರಿ ಇದ್ದರೆ ಅರ್ಜಿಯನ್ನು ಪರಿಗಣಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.