ಗುರುಮಠಕಲ್: ‘ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ಇಂದು ಭಾರತ ವಿಶ್ವದ ಆರ್ಥಿಕತೆಯಲ್ಲಿ ಉತ್ತಮ ಸ್ಥಾನದಲ್ಲಿದೆ. ನಮ್ಮ ಅಭಿವೃದ್ಧಿ ಕಂಡು ಅಮೆರಿಕಾದ ‘ಹುಚ್ಚು ಅಧ್ಯಕ್ಷ’ನಿಗೆ ಹೊಟ್ಟೆಕಿಚ್ಚು. ಆದ್ದರಿಂದ ನಮ್ಮ ಮೇಲೆ ಶೇ50 ಟ್ಯಾರಿಫ್ ವಿಧಿಸಿದ್ದಾನೆ’ ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು.

ಪಟ್ಟಣದ ಜವಹಾರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ‘ಸಾರ್ವಜನಿಕ ಧ್ವಜಾರೋಹಣ ಆಚರಣಾ ಸಮಿತಿ’ ವತಿಯಿಂದ ಆಯೋಜಿಸಿದ್ದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಲ್ಯಾಣ ಕರ್ನಾಟಕ ಭಾಗದ ಕೀರ್ತಿಯನ್ನು ಹೆಚ್ಚಿಸಿದ್ದ ದಾಸೋಹ ಪರಂಪರೆಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶರಣಬಸಪ್ಪ ಅಪ್ಪನವರ ನಿಧನವು ನಮ್ಮ ಭಾಗಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ’ ಎಂದು ಹೇಳಿದರು.

‘ಮುಂದಿನ ದಿನಗಳಲ್ಲಿ ತಾಲ್ಲೂಕು ಆಡಳಿತ ಶಿಸ್ತು ಮತ್ತು ಸಮಯ ಪಾಲನೆಯೊಡನೆ ಕಾರ್ಯಕ್ರಮಗಳನ್ನು ಆಯೋಜಿಸಲಿ’ ಎಂದರು.

ಶಿಕ್ಷಕ ಚಂದ್ರಶೇಖರ ಪಾಟೀಲ ವಿಶೇಷ ಉಪನ್ಯಾಸ ನೀಡಿ, ‘ದೇಶದ ಸ್ವಾತಂತ್ರ್ಯಕ್ಕೆ ಲಕ್ಷಾಂತರ ಹೋರಾಟಗಾರರು ಬಲಿಯಾಗಿದ್ದಾರೆ. ಅವರೆಲ್ಲಾ ನಮಗೆ ಆದರ್ಶವಾಗಲಿ, ಅವರಂತೆ ನಾವೂ ದೇಶಕ್ಕಾಗಿ ಸೇವೆ ಮಾಡೋಣ’ ಎಂದು ಕರೆ ನೀಡಿದರು.

ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಶ್ರೀಗಳು, ತಹಶೀಲ್ದಾರ್ ಶಾಂತಗೌಡ ಬಿರಾದರ, ಪುರಸಭೆ ಅಧ್ಯಕ್ಷೆ ಜಯಶ್ರೀ ಆರ್.ಪಾಟೀಲ, ಉಪಾಧ್ಯಕ್ಷೆ ರೇಣುಕಾ ವಿ.ಪಡಿಗೆ, ಗ್ರೇಡ್-2 ತಹಶೀಲ್ದಾರ್ ನರಸಿಂಹಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಶರಣಬಸವ, ಪಿಐ ವೀರಣ್ಣ ದೊಡ್ಡಮನಿ, ಪುರಸಭೆ ಮುಖ್ಯಾಧಿಕಾರಿ ಭಾರತಿ ಸಿ.ದಂಡೋತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.