ಶಹಾಪುರ: ಆದರ್ಶ ವಿದ್ಯಾಲಯದ ಮುಖ್ಯಶಿಕ್ಷಕ ಹಣಮಂತರಾಯ ಸೋಮಾಪುರ ಅವರಿಗೆ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ನಗರದ ಹೊರವಲಯದ ಆದರ್ಶ ವಿದ್ಯಾಲಯದ ಶಿಕ್ಷಣ ಕ್ಷೇತ್ರದ ಚಿತ್ರಣವನ್ನೇ ಬದಲಿಸಿ ರಾಜ್ಯದ ಗಮನ ಸೆಳೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

‘ಕಳೆದ ಆರು ವರ್ಷದಿಂದ ವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿರುವೆ. ಅದರಲ್ಲಿ ಮೂರು ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ. ಇನ್ನೂ ಮೂರು ವರ್ಷ ಶೇ 98ರಷ್ಟು ಫಲಿತಾಂಶ ಬಂದಿದೆ. ಐದು ವರ್ಷಗಳಿಂದಲೂ ಸತತವಾಗಿ ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿಯಲ್ಲಿ ಜಿಲ್ಲೆಗೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.

‘ರಾಷ್ಟ್ರಮಟ್ಟದ ಅತ್ಯುತ್ತಮ ಸ್ವಚ್ಛ ವಿದ್ಯಾಲಯ ಪ್ರಶಸ್ತಿ, ರಾಷ್ಟ್ರಮಟ್ಟದ ವಿಜ್ಞಾನ ಮಾದರಿಯಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆ ಮಾಡಿದ್ದಾರೆ. ಚುನಾವಣೆ ಆಯೋಗದಿಂದ ನಡೆಯುವ ಜಾಗೃತಿ ಅಭಿಯಾನದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಪ್ರಶಸ್ತಿ ಪಡೆದುಕೊಂಡಿದ್ದಾರೆ’ ಎಂದು ತಿಳಿಸಿದರು.

ಶಾಲೆಯ ಒಳಾವರಣದಲ್ಲಿ ಸುತ್ತಲು ಹಸಿರೀಕರಣಗೊಳಿಸಿದ್ದಾರೆ. 3000ಕ್ಕೂ ಅಧಿಕ ಪುಸ್ತಕಗಳ ಸಂಗ್ರಹದ ಗ್ರಂಥಾಲಯ, ಸಿಸಿ ಟಿವಿ, ಶುದ್ಧ ಕುಡಿಯುವ ನೀರಿನ ಘಟಕ, ಪ್ರತ್ಯೇಕ ಶೌಚಾಲಯ ಹೀಗೆ ವಿದ್ಯಾಲಯದಲ್ಲಿ ಅಗತ್ಯ ಮೂಲ ಸೌಲಭ್ಯವನ್ನು ಹೊಂದಿದೆ. ಮುಖ್ಯವಾಗಿ ಮಕ್ಕಳಿಗೆ ಅಗತ್ಯವಾಗಿ ಬೇಕಿರುವ ಕಲಿಕೆಯ ವಾತಾವರಣವನ್ನು ನಿರ್ಮಿಸಿದ್ದಾರೆ.

ಶಿಕ್ಷಕರ ಕೊರತೆಯ ನಡುವೆ ಪ್ರತಿ ವರ್ಷ ಅತ್ಯುತ್ತಮ ಸಾಧನೆ ತೋರಿಸುವುದರ ಮೂಲಕ ಸೋಮಾಪುರ ಅವರು ನಮ್ಮೆಲ್ಲರಿಗೆ ಆದರ್ಶ ಶಿಕ್ಷಕರಾಗಿ ಮಾದರಿಯಾಗಿದ್ದಾರೆ ಎನ್ನುತ್ತಾರೆ ಶಿಕ್ಷಕರು ಒಬ್ಬರು.

ಇದ್ದುದ್ದರಲ್ಲಿ ಶಕ್ತಿ ಮೀರಿ ಪ್ರಾಮಾಣಿಕವಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬಹುದು. ವೃತ್ತಿ ಸೇವೆ ಎಂಬುವುದು ನಮ್ಮ ಜೀವನದ ಉಸಿರಾಗಲಿ
ಹಣಮಂತರಾಯ ಸೋಮಾಪುರ, ಆದರ್ಶ ವಿದ್ಯಾಲಯ ಮುಖ್ಯಗುರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.