ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ದುರಾಡಳಿತ ನೋಡಿ ಬೇಸತ್ತ ಜನ: ಹಣಮಂತ ಲಿಂಗೇರಿ

Published 6 ನವೆಂಬರ್ 2023, 16:16 IST
Last Updated 6 ನವೆಂಬರ್ 2023, 16:16 IST
ಅಕ್ಷರ ಗಾತ್ರ

ಯಾದಗಿರಿ: ಎರಡನೇ ಅಧಿವೇಶನ ಬರುತ್ತಿದ್ದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಸಮರ್ಥ ನಾಯಕರು ಸಿಕ್ಕಿಲ್ಲ. ಹೀಗಾಗಿ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಲು ಆಗಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಮಾಧ್ಯಮ ವಕ್ತಾರ ಹಣಮಂತ ಲಿಂಗೇರಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು,  ರಾಜ್ಯದಲ್ಲಿ ಪ್ರಧಾನಿ ಮೋದಿ ಮುಖ ನೋಡಿ ಓಟು ಕೇಳುವ ಸಂದರ್ಭವನ್ನು ಬಿಜೆಪಿ ಕಳೆದುಕೊಂಡಿದೆ. ದೇಶದಲ್ಲಿ ಮೋದಿ ಅಲೆ ಇಲ್ಲ. ವಿರೋಧ ಪಕ್ಷದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ಐಟಿ ಮತ್ತು ಇಡಿ ದಾಳಿಗಳಿಂದ ಪ್ರಮುಖ ನಾಯಕರ ಮನಸ್ಸುಗಳನ್ನು ಕುಗ್ಗಿಸುತ್ತಿದ್ದಾರೆ. ಪ್ರಧಾನಮಂತ್ರಿಗಳ ಪ್ರಯತ್ನ ಫಲಿಸುವುದಿಲ್ಲ. ಕೇಂದ್ರ ಬಿಜೆಪಿ ಸರ್ಕಾರದ ದುರಾಡಳಿತವನ್ನು ನೋಡಿ ಜನ ರೋಸಿ ಹೋಗಿದ್ದಾರೆ. ರಾಜ್ಯದಲ್ಲಿ ಬರಗಾಲ ಹೆಚ್ಚಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಅನುದಾನ ಕೊಡದೇ ರಾಜ್ಯಕ್ಕೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT