ಶನಿವಾರ, ಡಿಸೆಂಬರ್ 7, 2019
24 °C
ಜಿಲ್ಲಾ ರೆಡ್ಡಿ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ಆಗ್ರಹ

ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳಿಗೆ  ಮರಣದಂಡನೆ ನೀಡಬೇಕು. ಅತ್ಯಾಚಾರ ಹಾಗೂ ಕೊಲೆ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡುವ ಕಾನೂನು ರೂಪಿಸುವಂತೆ ಆಗ್ರಹಿಸಿ ಜಿಲ್ಲಾ ರೆಡ್ಡಿ ಸಮಾಜ, ಇತರ ಸಂಘ–ಸಂಸ್ಥೆಗಳ ಸಹಯೋಗದಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು.

ಜಿಲ್ಲಾಧಿಕಾರಿ ಮುಖಾಂತರ ಮನವಿ ಪತ್ರ ಸಲ್ಲಿಸಿದ ಮಠಾಧೀಶರು ಹಾಗೂ ಮುಖಂಡರ ನಿಯೋಗ, ಭಾರತ ದೇಶ ಸಹಸ್ರಾರು ವರ್ಷಗಳಿಂದ ಹೆಣ್ಣನ್ನು ಮಾತೃ ಸ್ವರೂಪದಲ್ಲಿ ಪೂಜಿಸುತ್ತಾ ಬಂದಿರುವ ಪುಣ್ಯಭೂಮಿ.  ಪ್ರಜ್ಞಾವಂತ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಗಳು ನಡೆಯುತ್ತಿ ರುವುದು ವಿಷಾದನೀಯ. ಅತ್ಯಾಚಾರ ಮಾಡಿ ಜೀವಂತವಾಗಿ ಸುಟ್ಟು ಹಾಕುವ ಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

ಬಂಧಿಸಿದ ಆರೋಪಿಗಳಿಗೆ ಸಾರ್ವಜನಿಕವಾಗಿ ಗಲ್ಲಿಗೇರಿಸಿ, ದೇಶದ ಕಾನೂನು ಸಶಕ್ತವಾಗಿದೆ ಎಂದು  ತೋರಿಸುವ ಅವಶ್ಯಕತೆಯಿದೆ. ದೇಶದ ನ್ಯಾಯ ವ್ಯವಸ್ಥೆ ಬಿಗಿಯಾಗಬೇಕು. ದೇಶದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕಟ್ಟೆಚ್ಚರ ವಹಿಸಿ, ಮಕ್ಕಳಲ್ಲಿ ನೈತಿಕತೆ ಮಾನವೀಯ ಅನುಕಂಪ ಬಿತ್ತುವ ಶಿಕ್ಷಣ ವ್ಯವಸ್ಥೆ ಜಾರಿಗೆ ತರಬೇಕೆಂದು ಆಗ್ರಹಿಸಿತು.

ಗುರುಮಠಕಲ್ ಖಾಸಾಮಠದ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮೀಜಿ, ಹೆಡಗಿಮದ್ರಾ ಶಾಂತ ಶಿವಯೋಗೀಶ್ವರ ಮಠದ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ವಿಧಾನಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ಪಾಟೀಲ ತುನ್ನೂರ, ರಾಚಣ್ಣಗೌಡ ಮುದ್ನಾಳ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ, ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಸೋಮನಾಥ ಜೈನ್, ನಗರಸಭೆ ಮಾಜಿ ಅಧ್ಯಕ್ಷ ಶಶಿಧರರೆಡ್ಡಿ ಹೊಸಳ್ಳಿ, ಮಲ್ಲಣ್ಣಗೌಡ ಹಳಿಮನಿ ಕೌಳೂರ, ಅಯ್ಯಣ್ಣ ಹುಂಡೇಕಾರ, ಡಾ.ಸಿದ್ದರಾಜರೆಡ್ಡಿ, ಬಸ್ಸುಗೌಡ ಬಿಳ್ಹಾರ, ಬಸವಂತ ರಾಯಗೌಡ ವಡವಡಗಿ, ಜಗನ್ನಾಥರೆಡ್ಡಿ ಸಂಬರ, ಆರ್ .ಮಹಾದೇವಪ್ಪಗೌಡ ಅಬ್ಬೆ ತುಮಕೂರ, ಸಿದ್ದಣ್ಣಗೌಡ ಕೋಡಾಲ, ಜಯಪ್ರಕಾಶ ಮಾಲಿ ಪಾಟೀಲ ನಾಲವಾರ, ಶರಣಗೌಡ, ಡಾ.ಸಿದ್ದವೀರಪ್ಪಗೌಡ, ಮಲ್ಲರೆಡ್ಡಿ ಸಾಹು ತಂಗಡಗಿ, ಯಲ್ಲಾಲಿಂಗರೆಡ್ಡಿ ಇದ್ದರು.

ಪ್ರತಿಕ್ರಿಯಿಸಿ (+)