ಯಾದಗಿರಿ: ‘ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಅದರ ನೆನಪಿಗಾಗಿ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಗುತ್ತಿದೆ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಹೇಳಿದರು.

ನಗರದಲ್ಲಿ ಬುಧವಾರ ಬಿಜೆಪಿ ನಗರ ಮಂಡಲ ಯುವ ಮೋರ್ಚಾ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಪ್ರತಿ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಟ ಮಾಡಬೇಕು. ಸ್ವಾತಂತ್ರ್ಯದ ಇತಿಹಾಸವನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ಬ್ರಿಟಿಷರ ವಿರುದ್ಧ ನಡೆದ ಹೋರಾಟಗಳು ಮುಂದಿನ ಪೀಳಿಗೆಗೆ ತಿಳಿಸಬೇಕಿದೆ’ ಎಂದರು.

ಮುಖಂಡ ರಾಚಣ್ಣಗೌಡ ಮುದ್ನಾಳ ಮಾತನಾಡಿ, ‘ಪಕ್ಷ ಬೇಧ ಮರೆತು ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿ ರಾಷ್ಟ್ರದ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು’ ಎಂದು ಹೇಳಿದರು.

ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಬಂದ ಅಮೃತ ಮಹೋತ್ಸವ ದಿನದ ಅಂಗವಾಗಿ ಮನೆ ಮನೆಗೆ ತಿರಂಗಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶ ನಿವಾಸಿಗಳಿಗೆ ಹರ್ ಘರ್ ತಿರಂಗಾ ಆಚರಿಸುವಂತೆ ಕರೆ ನೀಡಿದ್ದಾರೆ’ ಎಂದರು.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್ ಸಾಹುಕಾರ ಮಾತನಾಡಿ, ‘ಜಿಲ್ಲೆಯಲ್ಲಿ ಯುವ ಮೋರ್ಚಾ ವತಿಯಿಂದ ರಾಷ್ಟ್ರಧ್ವಜದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ’ ಎಂದು ಹೇಳಿದರು.

ಮಾಜಿ ಜಿಲ್ಲಾಧ್ಯಕ್ಷ ಶರಣಭೂಪಾಲರಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮ, ಪರುಶುರಾಮ ಕುರಕುಂದಿ, ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಸೋನ್ನದ, ದೇವಿಂದ್ರಪ್ಪ ಕೊನೇರ, ಮಾರುತಿ ಕಲಾಲ್, ನಗರಸಭೆ ಉಪಾಧ್ಯಕ್ಷೆ ರುಖಿಯ್ ಬೇಗಂ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ಅಜಯ್ ಮಡ್ಡಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚವ್ಹಾಣ್, ಶ್ರೀದೇವಿ ಶೆಟ್ಟಹಳ್ಳಿ, ಕೃಷ್ಣಮೂರ್ತಿ ಕುಲಕರ್ಣಿ, ಭೀಮಣ್ಣಗೌಡ ಖ್ಯಾತನಾಳ, ನಗರಸಭೆ ಸದಸ್ಯರಾದ ವಿಲಾಸ ಪಾಟೀಲ, ಸುರೇಶ್ ಅಂಬಿಗೇರ, ಸ್ವಾಮಿದೇವ ದಾಸನಕೆರಿ ಸೇರಿ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.