ಗುರುವಾರ , ಸೆಪ್ಟೆಂಬರ್ 16, 2021
25 °C

ಹತ್ತಿಕುಣಿ ಅಣೆಕಟ್ಟಿನಿಂದ ನದಿಗೆ ನೀರು: ಮುಂಜಾಗ್ರತೆ ವಹಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಯಾದಗಿರಿ: ಹತ್ತಿಕುಣಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ನಿರಂತರವಾಗಿ ಒಳಹರಿವು ಹೆಚ್ಚಾಗುತ್ತಿದ್ದು, ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಅಣೆಕಟ್ಟೆ ಮೂಲಕ ನದಿಗೆ ಹರಿಬಿಡಲಾಗುವುದು ಎಂದು ನೀರಾವರಿ ನಿಗಮ ನಿಯಮಿತ ಬೆಣ್ಣೆತೋರ ಯೋಜನೆ ವಿಭಾಗದ ನಂ.4 ಹೆಬ್ಬಾಳ, ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.
 
ಹತ್ತಿಕುಣಿ ನದಿಯ ಸುತ್ತ ಮುತ್ತಲಿನ ಗ್ರಾಮಗಳಿಗೆ ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿಯ ಅಕ್ಕಪಕ್ಕದ ಜನರು, ನದಿಯಲ್ಲಿ ಈಜುವುದಾಗಲಿ, ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನಿತರ ಕಾರಣಗಳಿಗಾಗಿ ನದಿಗೆ ಇಳಿಯಬಾರದು. ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ, ಮುಂಜಾಗ್ರತೆಯಾಗಿ ಸುರಕ್ಷಿತ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು