ಶುಕ್ರವಾರ, ಜುಲೈ 23, 2021
23 °C

ಶಾಲೆಯಲ್ಲಿ ಮದ್ಯಪಾನ; ಮುಖ್ಯ ಶಿಕ್ಷಕ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಶಾಲೆಯಲ್ಲಿ ಮದ್ಯ ಸೇವಿಸಿದ ಆರೋಪದ ಮೇಲೆ ವಡಗೇರಾ ತಾಲ್ಲೂಕಿನ ತುಮಕೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ.

‘ಪ್ರತಿ ದಿನ ಶಾಲೆಯಲ್ಲಿ ಮದ್ಯ ಸೇವಿಸುತ್ತಾರೆ. ಎಷ್ಟು ಬಾರಿ ಹೇಳಿದರೂ ಕೇಳುತ್ತಿಲ್ಲ. ಇದರಿಂದ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ’ ಎಂದು ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದರು.

‘ಒಬ್ಬ ಜವಾಬ್ದಾರಿಯುತ ಮುಖ್ಯ ಶಿಕ್ಷಕ ಹೀಗೆ ಮಾಡುವುದು ಸರಿಯಲ್ಲ. ವರದಿ ತರಿಸಿಕೊಂಡು ಅವರನ್ನು ಅಮಾನತು ಮಾಡಲಾಗಿದೆ’ ಎಂದು ಶಹಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.