ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ: ಮುಖ್ಯ ಶಿಕ್ಷಕ ಅಮಾನತು

Published 11 ಜನವರಿ 2024, 8:45 IST
Last Updated 11 ಜನವರಿ 2024, 8:45 IST
ಅಕ್ಷರ ಗಾತ್ರ

ಯಾದಗಿರಿ: ಶಾಲಾ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯ ಲೋಪವೆಸಗಿದ ಅನಪುರ ಶಾಲೆಯ ಮುಖ್ಯ ಶಿಕ್ಷಕನನ್ನು ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪಂವಾರ್ ಅಮಾನತು ಮಾಡಿ ಆದೇಶಿಸಿದ್ದಾರೆ‌.

ಕ್ಷೇತ್ರ ಶಿಕ್ಷಣಾಧಿಕಾರಿ ವರದಿ ಅನ್ವಯ ಗುರುಮಠಕಲ್ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಹಣಮೇಗೌಡ ಅಮಾನತುಗೊಂಡವರು.

ಶಾಲೆಯ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆಂದು ದೂರು ಬಂದ ಹಿನ್ನೆಲೆಯಲ್ಲಿ ತನಿಖಾ ತಂಡ ರಚನೆ ಮಾಡಲಾಗಿತ್ತು. ಶಾಲೆಗೆ ಭೇಟಿ ನೀಡಿದ ತಂಡ ವಿದ್ಯಾರ್ಥಿಗಳ ಹೇಳಿಕೆ ಪರಿಗಣಿಸಲಾಗಿದೆ. ‌ಶಾಲಾ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ತೋರಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957 ನಿಯಮ 10 (ಡಿ) ಅನ್ವಯ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿರಿಸಲಾಗಿದೆ.

ಸಕ್ಷಮ ಪ್ರಾಧಿಕಾರಿಯ ಲಿಖಿತ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಅವರ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT