ಯಾದಗಿರಿ: ‘ದೇವದಾಸಿ ಪದ್ಧತಿಯು ಸಮಾಜಕ್ಕೆ ಅನಿಷ್ಟವಾಗಿದ್ದು, ಇದು ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ದೇವದಾಸಿ ಮಹಿಳೆಯರಿಗೆ ಹಲವು ಅನಾರೋಗ್ಯ ಸಮಸ್ಯೆ ಕಾಡುವ ಸಾಧ್ಯತೆಗಳಿದ್ದು, ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಿ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಿರದಾರ ಸಲಹೆ ನೀಡಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ದೇವದಾಸಿ ಪುನರ್ವಸತಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಮಾಜಿ ದೇವದಾಸಿ ಮಹಿಳೆಯರಿಗಾಗಿ ಜಿಲ್ಲಾ ಮಟ್ಟದ ಆರೋಗ್ಯ ತಪಾಸಣಾ ಶಿಬಿರ’ದಲ್ಲಿ ಅವರು ಮಾತನಾಡಿದರು.

‘ಮಾಜಿ ದೇವದಾಸಿ ಮಹಿಳೆಯರು ನಿರಂತರ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ, ಆರೋಗ್ಯದ ಮಾಹಿತಿಯೊಡನೆ ಸೂಕ್ತ ಚಿಕಿತ್ಸೆ ಪಡೆಯಿರಿ. ಸರ್ಕಾರದ ಸೌಲಭ್ಯಗಳನ್ನು ಪಡೆಯಿರಿ. ಪೌಷ್ಟಿಕ ಆಹಾರ ಸೇವನೆ, ರಕ್ತ ಹೀನತೆ ಆಗದಂತೆ ಎಚ್ಚರವಹಿಸಿ’ ಎಂದು ಹೇಳಿದರು.

ದೇವದಾಸಿಯರ ಪುನರ್ವಸತಿ ಯೋಜನಾಧಿಕಾರಿ ಶಿವಮಂಗಳ ಮಾತನಾಡಿ, ‘ದೇವದಾಸಿ ಪದ್ಧತಿಯಿಂದ ಹೊರಬರಲು ಮತ್ತು ಮಾಜಿ ದೇವದಾಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಆರೋಗ್ಯ ಶಿಬಿರಗಳು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಸದುಪಯೋಗ ಪಡೆಯಿರಿ’ ಎಂದರು.

ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸಂಜೀವಕುಮಾರ ರಾಯಚೂರಕರ್ ಮತ್ತು ಟಿಎಚ್ಒ ಡಾ.ಹಣಮಂತರೆಡ್ಡಿ ಮಾತನಾಡಿ, ‘ಬೇಸಿಗೆ ಕಾಲ ಇರುವುದರಿಂದ ಫಿಲ್ಟರ್ ನೀರು ಅಥವಾ ಕಾಯಿಸಿ ಆರಿಸಿದ ನೀರನ್ನು ಸೇವನೆ ಮಾಡಬೇಕು, ಸಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗೃತೆವಹಿಸಿ, ದಿನನಿತ್ಯದ ಕೆಲಸ ಕಾರ್ಯಗಳನ್ನು ಬೆಳಿಗ್ಗೆ ಮತ್ತು ಸಂಜೆ ಮಾಡಿಕೊಳ್ಳಿ, ಬಿಸಿಲಿನಲ್ಲಿ ಹೊರಗೆ ಹೋಗುವಾಗ ಕೊಡೆ, ಟೊಪ್ಪಿಗೆ, ಟಾವೆಲ್ಗಳನ್ನು ಬಳಸಬೇಕು’ ಎಂದರು.

ಸಿಡಿಪಿಒ ದಿಪೀಕಾ ಬಿ.ವಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಮಲ್ಲಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಎಂ.ಎ.ಸಾಜಿದ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಜ್ಯೋತಿ ಕಟ್ಟಿಮನಿ, ಜಿಲ್ಲಾ ಎನ್ಸಿಡಿ ಕಾರ್ಯಕ್ರಮ ಅಧಿಕಾರಿ ಡಾ.ಪದ್ಮಾನಂದ ಗಾಯಕ್ವಾಡ್, ಸುರಪುರ ತಾಲ್ಲೂಕು ಪಂಚಾಯಿತಿ ಇಒ ಬಸವರಾಜ ಸಜ್ಜನ್, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಜಗನ್ನಾಥ, ಡಾ.ವಿನುತಾ, ಡಾ.ಕ್ಷಿತೀಜ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಅಧಿಕಾರಿ, ಸಿಬ್ಬಂದಿ, ಮಾಜಿ ದೇವದಾಸಿಯರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮೀ ಮುಂಡಾಸ ನಿರ್ವಹಿಸಿ, ಮಾಳಪ್ಪ ಯಾದವ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.