ಸೋಮವಾರ, ಮಾರ್ಚ್ 1, 2021
17 °C
ಸಪ್ತಗಿರಿ ಆಸ್ಪತ್ರೆ, ಸಿದ್ದಿವಿನಾಯಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ತಪಾಸಣೆ: ಡಾ.ಮಹೇಶರೆಡ್ಡಿ

ಯಾದಗಿರಿ: ಆರೋಗ್ಯ ತಪಾಸಣೆ ಶಿಬಿರ ಜ.18ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರದ ಟ್ಯಾಂಕ್ ಬಂಡ್ ಹತ್ತಿರದಲ್ಲಿರುವ ಸಿದ್ಧಿವಿನಾಯಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.18ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವೆರೆಗೆ ಹೃದಯ ರೋಗ, ನರರೋಗ, ಮೂತ್ರಪಿಂಡ ಹಾಗೂ ಕ್ಯಾನ್ಸರ್ ರೋಗಿಗಳ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಮಹೇಶರೆಡ್ಡಿ ತಿಳಿಸಿದರು.

ಬೆಂಗಳೂರು ಸಪ್ತಗಿರಿ ಆಸ್ಪತ್ರೆ ಹಾಗೂ ಸಿದ್ಧಿವಿನಾಯಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ನಡೆಯುವ ಶಿಬಿರದಲ್ಲಿ ಬೆಂಗಳೂರಿನ ವೈದ್ಯರು ತಪಾಸಣೆ ನಡೆಸಲಿದ್ದು, ಅಗತ್ಯವಿದ್ದಲ್ಲಿ ಶಸ್ತ್ರ ಚಿಕಿತ್ಸೆಗೆ ಶಿಫಾರಸು ಮಾಡಲಾಗುವುದು. ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ಬಿಪಿ, ಇಸಿ, 2ಡಿ ಎಕೋ ಸ್ಕ್ಯಾನಿಂಗ್‌ ಮಾಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೃದಯ, ನರ, ಕಿಡ್ನಿ ಕಲ್ಲುಗಳ ಸಮಸ್ಯೆಗೆ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್‌ದಾರರಿಗೆ ಉಚಿತವಾಗಿ ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರು ಸಪ್ತಗಿರಿ ಆಸ್ಪತ್ರೆಯಲ್ಲಿ ನಡೆಸಲಾಗುವುದು. ಮಾಹಿತಿಗೆ ಮೊ: 96110 61234 ಗೆ ಸಂಪರ್ಕಿಸಬಹುದು’ ಎಂದರು.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಸಪ್ತಗಿರಿ ಆಸ್ಪತ್ರೆಯ ವ್ಯವಸ್ಥಾಪಕ ರಾಜೇಶ ಗೌಡ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು