ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸುರಪುರ: ವಿವಿಧೆಡೆ ವೈದ್ಯರ ತಂಡ ದಾಳಿ

Published 14 ಡಿಸೆಂಬರ್ 2023, 14:19 IST
Last Updated 14 ಡಿಸೆಂಬರ್ 2023, 14:19 IST
ಅಕ್ಷರ ಗಾತ್ರ

ಸುರಪುರ: ತಾಲ್ಲೂಕು ಆರೋಗ್ಯಾಧಿಕಾರಿ ನೇತೃತ್ವದ ತಂಡ ನಗರದಲ್ಲಿ ಗುರುವಾರ ವಿವಿಧ ಖಾಸಗಿ ಆಸ್ಪತ್ರೆ ಹಾಗೂ ಡಯಗ್ನೋಸ್ಟಿಕ್‌ ಕೇಂದ್ರಗಳ ಮೇಲೆ ದಾಳಿ ನಡೆಸಿತು. ಕೆಪಿಎಂಇ ಕಾಯ್ದೆ ಅಡಿ ನೋಂದಣಿ ಮಾಡಿಕೊಳ್ಳದಿರುವ ಆಸ್ಪತ್ರೆ ಮತ್ತು ಡಯಗ್ನೋಸ್ಟಿಕ್‌ ಕೇಂದ್ರಗಳನ್ನು ಸೀಜ್ ಮಾಡಲಾಯಿತು.

‘ಪಾಟೀಲ ಡಯಗ್ನೋಸ್ಟಿಕ್‌ ಮತ್ತು ಅಂಕುರ ಹೋಮಿಯೋಪತಿ ಕ್ಲಿನಿಕ್ ಮತ್ತು ಸೂಗುರೇಶ್ವರ ಕ್ಲಿನಿಕ್‍ಗಳ ಮೇಲೆ ದಾಳಿ ಮಾಡಲಾಗಿದೆ. ಪರಿಶೀಲನೆ ವೇಳೆ ಕೆಪಿಎಂಇ ಕಾಯ್ದೆ ಅಡಿ ನೋಂದಣಿ ಮಾಡಿಕೊಳ್ಳದಿರುವ ಬಗ್ಗೆ ಕಂಡು ಬಂದಿದ್ದು ಆಸ್ಪತ್ರೆಗಳನ್ನು ಸೀಜ್ ಮಾಡಲಾಗಿದೆ. ಸಂಬಂಧಿಸಿದ ಆಸ್ಪತ್ರೆಗಳ ವೈದ್ಯರು ಮತ್ತು ಡಯಗ್ನೋಸ್ಟಿಕ್ ಕೇಂದ್ರಗಳ ಮುಖ್ಯಸ್ಥರಿಗೆ ನೋದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಪ್ಪ ನಾಯಕ ತಿಳಿಸಿದರು.

‘ಖಾಸಗಿ ಆಸ್ಪತ್ರೆ ಆರಂಭಿಸಲು ನಮ್ಮದೇನು ಅಭ್ಯಂತರವಿಲ್ಲ. ಕಾಯ್ದೆ ಅಡಿ ನೋಂದಣಿ ಮಾಡಿಕೊಂಡು ಆರೋಗ್ಯ ಸೇವೆ ನೀಡಬಹುದು. ಜನರ ಆರೋಗ್ಯದ ವಿಷಯದಲ್ಲಿ ಚೆಲ್ಲಾಟವಾಡುವುದು ಸರಿಯಲ್ಲ. ನೋಂದಣಿಗೆ ಅವಕಾಶ ಮಾಡಿಕೊಡುತ್ತೇವೆ. ನಿರ್ಲಕ್ಷ್ಯವಹಿಸಿ ನೋಂದಣಿ ಮಾಡಿಕೊಳ್ಳದೆ ಇದ್ದಲ್ಲಿ ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT