ಸುರಪುರ: ‘ಆರೋಗ್ಯ ಸೇವೆಗಳು ಜನಸಾಮಾನ್ಯರಿಗೆ ಸುಲಭವಾಗಿ ತಲುಪಬೇಕು ಎಂಬ ಮಹತ್ತರ ಉದ್ದೇಶದೊಂದಿಗೆ ಕ್ಷೇತ್ರದಲ್ಲಿ ಇತರ ಕ್ಷೇತ್ರಗಳ ಜೊತಗೆ ಆರೋಗ್ಯ ಕ್ಷೇತ್ರಕ್ಕೂ ಪ್ರಾಶಸ್ತ್ಯ ನೀಡಲಾಗುತ್ತಿದೆ’ ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ಹೇಳಿದರು.

ತಾಲ್ಲೂಕಿನ ರುಕ್ಮಾಪುರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮೈಕ್ರೋ ಕ್ರಿಯಾ ಯೋಜನೆ ಅಡಿಯಲ್ಲಿ ₹ 82 ಲಕ್ಷ ವೆಚ್ಚದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

‘ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಂಜೂರಿ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು, ಸಮರ್ಪಕ ವೈದ್ಯಕೀಯ ಸಲಕರಣೆಗಳ ವ್ಯವಸ್ಥೆ, ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿ ಜತೆಗೆ ಉತ್ತಮ ಸೇವೆ ಗುರಿ ಹೊಂದಲಾಗಿದೆ’ ಎಂದರು.

‘ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಸಂಬಂಧಿಸಿದವರಿಗೆ ತಾಕೀತು ಮಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ. ನಾಯಕ, ಹೆಮನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಿದ್ದಯ್ಯ ಹಿರೇಮಠ, ಕೆವೈಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಠ್ಠಲ ಯಾದವ, ಪಿಡಿಒ ದುರ್ಗಾಶ್ರೀ ನಾಯಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ, ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ಹಣಮಗೌಡ ದಳಪತಿ, ಗ್ರಾಮದ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.