ಸೋಮವಾರ, ಜುಲೈ 4, 2022
21 °C

ಯಾದಗಿರಿ: ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾದವರಿಂದ ಪ್ರಶ್ನೆ ಪತ್ರಿಕೆ ವಾಪಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಂಭಾವಿ (ಯಾದಗಿರಿ ಜಿಲ್ಲೆ): ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಂಗಳವಾರ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ನ್ಯಾಯಾಲಯದ ಆದೇಶ ಉಲ್ಲಂಘಿಸಲಾಗಿದೆ ಎನ್ನುವ ಆರೋಪ‌ ಕೇಳಿ ಬಂದಿದೆ.

ಪದವಿ ಮೊದಲನೆ ಸೆಮಿಸ್ಟರ್ ಪ್ರಾಯೋಗಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಆಗಮಿಸಿದ ಸುಮಾರು ಐದು ವಿದ್ಯಾರ್ಥಿನಿಯರಿಗೆ ಅವಕಾಶ ಮಾಡಿಕೊಡಲಾಗಿದೆ.

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಾಲೇಜಿನಲ್ಲಿ ಗದ್ದಲ ಉಂಟಾಗಿದೆ. ಕೂಡಲೇ ಪರೀಕ್ಷಾ ಮೇಲ್ವಿಚಾರಕರು ಒಂದು ಗಂಟೆಯ ನಂತರ ಪ್ರಶ್ನೆ ಪತ್ರಿಕೆ ಮರಳಿ ಪಡೆದಿದ್ದಾರೆ.

ಈ ಕುರಿತು ಕಾಲೇಜಿನ ಪ್ರಾಚಾರ್ಯ ಎಚ್.ಎಂ.ವಗ್ಗರ್ ಘಟನೆ ಬಗ್ಗೆ ನನಗೆನೂ ಗೊತ್ತಿಲ್ಲವೆಂದು ತಿಳಿಸಿದ್ದಾರೆ.

ಕಾಲೇಜಿನ ಪ್ರಾಚಾರ್ಯ ಮತ್ತು ಪರೀಕ್ಷಾ ಮೇಲ್ವಿಚಾರಕರ ಪ್ರಮಾದದಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು