ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸಗಿ | ಹೋಳಿ ಸಡಗರ: ಬಣ್ಣದಲ್ಲಿ ಮಿಂದೆದ್ದ ಜನ 

Published 26 ಮಾರ್ಚ್ 2024, 15:53 IST
Last Updated 26 ಮಾರ್ಚ್ 2024, 15:53 IST
ಅಕ್ಷರ ಗಾತ್ರ

ಹುಣಸಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಜ್ಜಲ, ಚನ್ನೂರು ಸೇರಿದಂತೆ ಇತರ ಗ್ರಾಮೀಣ ಭಾಗದಲ್ಲಿ ಮಕ್ಕಳು, ಯುವಕರು ಮಹಿಳೆಯರು ಹೋಳಿ ಹಬ್ಬದ ಅಂಗವಾಗಿ ರಂಗಿನಾಟವಾಡಿ ಸಂಭ್ರಮಿಸಿದರು.

ಹುಣಸಗಿ ಪಟ್ಟಣದಲ್ಲಿ ಯುವಕರು ಕಾಮದಹನ ಮಾಡಿ ಸಂಭ್ರಮಿಸಿದರು. ಪಟ್ಟಣದ ಬೀದಿ ಬೀದಿಯಲ್ಲಿ ಯುವಕರು ತಂಡೋಪತಂಡವಾಗಿ ಹಲಗೆಯ ನಾದಕ್ಕೆ ಹೆಜ್ಜೆ ಹಾಕುತ್ತಾ ಪರಸ್ಪರ ಬಣ್ಣ ಎರಚಿ ರಂಗಿನಾಟದಲ್ಲಿ ತೊಡಗಿದ್ದರು.

ಮಕ್ಕಳು ಬಣ್ಣದ ನೀರಿನ ಬಾಟಲ್‌ಗಳನ್ನು ಹಿಡಿದು ತಮ್ಮ ಗೆಳೆಯರ ಮನೆಗಳಿಗೆ ತೆರಳಿ ಪರಸ್ಪರ ಬಣ್ಣ ಎರಚುತ್ತಾ ಓಣಿ ಅಂಗಳದಲ್ಲಿ ಓಡಾಡಿದರು.

ಹುಣಸಗಿ ಪಟ್ಟಣದ ಜನತಾ ಕಾಲೊನಿಯಲ್ಲಿ ಮಹಿಳೆಯರು ಪರಸ್ಪರ ಬಣ್ಣ ಹಾಕಿ ಹೋಳಿ ಹಬ್ಬವನ್ನು ಆಚರಿಸಿದರು
ಹುಣಸಗಿ ಪಟ್ಟಣದ ಜನತಾ ಕಾಲೊನಿಯಲ್ಲಿ ಮಹಿಳೆಯರು ಪರಸ್ಪರ ಬಣ್ಣ ಹಾಕಿ ಹೋಳಿ ಹಬ್ಬವನ್ನು ಆಚರಿಸಿದರು

ಹೋಳಿ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಯಾವುದೇ ಅಂಗಡಿ ಮುಂಗಟ್ಟು ತೆರೆದಿರಲಿಲ್ಲ. ವ್ಯಾಪಾರಸ್ಥರು ಕೂಡಾ ತಮ್ಮ ಕುಟುಂಬ ಸದಸ್ಯರೊಂದಿಗೆ ಕೂಡಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT