ಯಾದಗಿರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಷಸರ್ಪ ಎಂದು ಹೇಳಿದ್ದರು. ಅದನ್ನು ಪ್ರಧಾನಿಯವರು ಲೆಕ್ಕಕ್ಕೆ ತೆಗೆದುಕೊಳ್ಳದೇ ದೊಡ್ಡದು ಮಾಡಲಿಲ್ಲ, ರಾಜಕೀಯದಲ್ಲಿ ಟೀಕೆ, ಟಿಪ್ಪಣೆಗಳು ಸಹಜ. ಛಲವಾದಿ ನಾರಾಯಣ ಸ್ವಾಮಿ ಅವರು ಮಾತಿನ ಭರದಲ್ಲಿ ಬಾಯಿತಪ್ಪಿ ಆಡಿದ ಮಾತನ್ನೇ ಇಷ್ಟು ದೊಡ್ಡದಾಗಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ ಹೇಳಿದರು.

ಚಿತ್ತಾಪುರಕ್ಕೆ ಆಗಮಿಸಿದ್ದ ರಾಜ್ಯ ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಿಗೆ ಗೃಹ ದಿಗ್ಬಂಧನ ಮಾಡಿ ರೌಡಿಗಳಂತೆ ಚಿತ್ತಾಪುರ ಕಾಂಗ್ರೆಸ್ ಕಾರ್ಯಕರ್ತರು ವರ್ತಿಸಿದ್ದಾರೆ. ಇದು ರಾಜ್ಯ ಸರ್ಕಾರದ ಗೂಂಡಾರಾಜ್ಗೆ ಜ್ವಲಂತ ಉದಾಹರಣೆಯಾಗಿದ್ದು, ಪ್ರತಿಪಕ್ಷ ನಾಯಕನಿಗೆ ಹೀಗಾದರೆ ರಾಜ್ಯದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಹಾಗೂ ಸರ್ಕಾರ ಯಾವರೀತಿ ವರ್ತಿಸುತ್ತಿದೆ ಎಂಬುದನ್ನು ಬೇರೆ ಹೇಳಬೇಕಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿಯವರನ್ನು ಟೀಕಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಛಲವಾದಿ ಅವರು ಸೂಚ್ಯವಾಗಿ ಆನೆ ಹೋಗುತ್ತಿರುತ್ತದೆ. ನಾಯಿಗಳು ಬೊಗಳುತ್ತಿರುತ್ತವೆ ಎಂದು ಪ್ರತಿಕ್ರಿಯಿಸಿದ್ದಾರೆ. ನಂತರ ಅವರು ಚಿತ್ತಾಪುರಕ್ಕೆ ತೆರಳಿದ್ದರು. ಆದನ್ನು ಮುಂದಿಟ್ಟುಕೊಂಡು ತಮಗೆ ಬೈದಿದ್ದಾರೆ ಎಂಬಂತೆ ಭಾವಿಸಿಕೊಂಡ ಕಾಂಗ್ರೆಸ್ನವರು ಚಿತ್ತಾಪುರದಲ್ಲಿ 3-4 ತಾಸು ಅವರಿಗೆ ಗೃಹ ದಿಗ್ಬಂಧನ ಹೇರಿ ಭಯದ ವಾತಾವರಣ ಸೃಷ್ಟಿಸಿರುವುದು ಅತ್ಯಂತ ನಾಚಿಕೆಗೇಡು ಎಂದು ಟೀಕಿಸಿದರು.

ಪ್ರತಿಪಕ್ಷ ನಾಯಕರ ಹೇಳಿಕೆಗೆ ಪ್ರತಿಹೇಳಿಕೆ ನೀಡಿದರೆ ಅದು ಪ್ರಜಾಪ್ರಭುತ್ವ ರೀತಿಯ ನಡವಳಿಕೆಯಾಗುತ್ತದೆ. ಆದರೆ, ದೌರ್ಜನ್ಯ ಮಾಡಿರುವುದು ಒಂದು ಆಡಳಿತ ಪಕ್ಷದ ಮಂತ್ರಿಯ ಕುಮ್ಮಕ್ಕಿನಿಂದ ಕಾರ್ಯಕರ್ತರು ದೌರ್ಜನ್ಯ ನಡೆಸುತ್ತಿರುವುದು ಅಕ್ಷಮ್ಯವಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಕಠಿಣ ಕ್ರಮಜರುಗಿಸಬೇಕು ಎಂದು ಆಗ್ರಹಿಸಿದರು.

ಚಿತ್ತಪುರದಲ್ಲಿ ಪ್ರತ್ಯೇಕ ಗೂಂಡಾ ರಿಪಬ್ಲಿಕ್ ಇದೆಯೇ ಎಂದು ಪ್ರಶ್ನಿಸಿದ ಅವರು, ಇಂತಹ ಘಟನೆಗಳು ಚಿತ್ತಾಪುರದಲ್ಲಿ ಪದೇ ಪದೇ ಮರುಕಳಿಸುತ್ತಿವೆ. ಇದಕ್ಕೆ ಮುಖ್ಯಮಂತ್ರಿ ತಕ್ಷಣ ಕಠಿಣ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಬಿಜೆಪಿ ಉಗ್ರ ಹೋರಾಟ ರೂಪಿಸಲಿದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ, ರಾಜ್ಯ ಮಾಜಿ ಉಪಾಧ್ಯಕ್ಷೆ ನಾಗರತ್ನಾ ಕುಪ್ಪಿ, ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವೇಂದ್ರನಾಥ ನಾದ, ಮಾಜಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶರಣಭೂಪಾಲರಡ್ಡಿ ನಾಯ್ಕಲ್, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಗುರುಕಾಮಾ, ನಗರ ಮಂಡಲ ಲಿಂಗಪ್ಪ ಹತ್ತಿಮನಿ, ಜಿಲ್ಲಾ ಮಾದ್ಯಮ ಸಂಚಾಲಕ ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.