ಯಾದಗಿರಿ: ಜಿಲ್ಲೆಗೆ ಮಹಾನಗರಗಳಿಂದ ಹಿಂದಿರುಗಿ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ವಲಸಿಗರ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ‘ವಲಸಿಗರ ಸಮೀಕ್ಷೆ ಕಾರ್ಯ’ ಶನಿವಾರ ಆರಂಭವಾಗಿದೆ.

ಮೊದಲ ಹಂತವಾಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ವಲಸಿಗರು ಹಿಂದಿರು ಗಿರುವ ಯಾದಗಿರಿ ತಾಲ್ಲೂಕಿನ ಕೌಳೂರು, ಶಹಾಪುರ ತಾಲ್ಲೂಕಿನ ದೋರನಹಳ್ಳಿ ಮತ್ತು ಸುರಪುರ ತಾಲ್ಲೂಕಿನ ಬರದೇವನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಸಮೀಕ್ಷೆ ಕಾರ್ಯ ಪ್ರಾರಂಭಿಸಲಾಗಿದೆ.

ಗ್ರಾಮ ಪಂಚಾಯಿತಿಗಳ ಕಾರ್ಯದರ್ಶಿಗಳು, ಕರವಸೂ ಲಿಗಾರರು, ಕಂಪ್ಯೂಟರ್ ಆಪರೇಟರ್‌ಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯ ಕರ್ತೆಯರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿದ್ದಾರೆ.

ಯಾದಗಿರಿ ತಾಲ್ಲೂಕಿನ ಕೌಳೂರು ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾ ಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಭೇಟಿ ನೀಡಿ ಮನೆಮನೆ ಸಮೀಕ್ಷೆ ಮಾಡುವ ಸಿಬ್ಬಂದಿಗೆ ತರಬೇತಿ ನೀಡಿದರು. ನಂತರ ಬೆಂಗಳೂರಿನಿಂದ ಹಿಂದಿರುಗಿದ ಐದು ಕುಟುಂಬಗಳ ಸಮೀಕ್ಷೆ ಕಾರ್ಯ ಮೇಲ್ವಿಚಾರಣೆ ಮಾಡಿದರು.

ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಪಂಗೆ ತೆರಳಿ ಮುಂಬೈನಿಂದ ಹಿಂದಿರುಗಿದ ವಲಸಿಗರ ಮನೆಗಳ ಸಮೀಕ್ಷೆ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.