ಗುರುವಾರ , ಸೆಪ್ಟೆಂಬರ್ 29, 2022
28 °C

ಶಿವಶರಣ ಹೂಗಾರ ಮಾದಯ್ಯ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಶಹಾಪುರ: ‘ಆರ್ಥಿಕವಾಗಿ ಹಿಂದುಳಿದ ಹೂಗಾರ ಸಮುದಾಯಕ್ಕೆ ಸರ್ಕಾರದಿಂದ ಸೂಕ್ತ ಸೌಲಭ್ಯ, ಸವಲತ್ತು ನೀಡಬೇಕು. ಸಮುದಾಯದ ಪ್ರತಿಯೊಬ್ಬರೂ ಆರ್ಥಿಕ ಸಮಸ್ಯೆಯ ನಡುವೆ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಶಿಕ್ಷಣದಿಂದ ಯಾರು ವಂಚಿತರಾಗಬಾರದು’ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

ನಗರದ ಜೀಹ್ವೇಶ್ವರ ಕಲ್ಯಾಣ ಮಂಟದಲ್ಲಿ ಹೂಗಾರ ಸಮಾಜದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಹೂಗಾರ ಮಾದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬ್ರಹ್ಮ ಸಿದ್ದ ಶಿವಾಚಾರ್ಯರು,ಚರಬಸವೇಶ್ವರ ಗದ್ದುಗೆ ವೇದಮೂರ್ತಿ ಬಸವಯ್ಯ ಶರಣರು, ಡಾ.ಚಂದ್ರಶೇಖರ ಸುಬೇದಾರ, ಮಲ್ಲಣ್ಣ ಮಡ್ಡಿ ಸಾಹು ಸಿದ್ದು ಸಾಹು ಆರಬೊಳ, ಶಿವರಾಜ ದೇಶಮುಖ್, ಸಣ್ಣ ನಿಂಗಣ್ಣ ನಾಯ್ಕೊಡಿ, ನೀಲಕಂಠ ಬಡಿಗೇರ, ಹೂಗಾರ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಮಾನಪ್ಪ ಹೂಗಾರ, ದೇವಿಂದ್ರಪ್ಪ ಹೂಗಾರ, ಶಿವಶರಣಪ್ಪ, ಶಾಂತಪ್ಪ, ಅಮೃತ ಹೂಗಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.