ಹುಣಸಗಿ: ‘ಪ್ರತಿಯೊಬ್ಬರೂ ಆರೋಗ್ಯದಿಂದ ಇದ್ದಾಗ ಮಾತ್ರ ನಿತ್ಯದ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಕಾರ್ಮಿಕರು ಕೂಡಾ ತಮ್ಮ ಆರೋಗ್ಯದ ಕಾಳಜಿವಹಿಸುವುದು ಅಗತ್ಯ’ ಎಂದು ತಹಶೀಲ್ದಾರ್ ಎಂ.ಬಸವರಾಜ ಹೇಳಿದರು.

ಹುಣಸಗಿ ತಾಲ್ಲೂಕಿನ ಮಾಳನೂರು ಗ್ರಾಮ ಪಂಚಾಯಿತಿಯಿಂದ ಮಾರಲಬಾವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘40 ವರ್ಷ ಮೇಲ್ಪಟ್ಟವರು ಎಲ್ಲರೂ ಆಗಾಗ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಮುಂಬರುವ ಸಮಸ್ಯೆಗೆ ಈಗಲೇ ಪರಿಹಾರ ಕಂಡು ಕೊಂಡಂತಾಗುತ್ತದೆ. ಅಲ್ಲದೇ ಬಿ.ಪಿ ಮಧುಮೇಹ ಸೇರಿದಂತೆ ಯಾವುದೇ ಕಾಯಿಲೆಗಳಿದ್ದಲ್ಲಿ ವೈದ್ಯರ ಸಲಹೆಯಂತೆ ಮಾತ್ರೆಗಳನ್ನು ತೆಗೆದುಕೊಂಡಲ್ಲಿ ರೋಗಗಳನ್ನು ಹತೋಟಿಯಲ್ಲಿ ಇಡಬಹುದಾಗಿದೆ. ಆ ಮೂಲಕ ಕುಟುಂಬದ ನೆಮ್ಮದಿಗೂ ಒತ್ತು ನೀಡಿದಂತಾಗುತ್ತದೆ’ ಎಂದು ಹೇಳಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ನಾಯಕ ಮಾತನಾಡಿ, ‘ಇಂದಿನ ಒತ್ತಡದ ಬದುಕಿನಲ್ಲಿ ಯಾವುದೇ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರು ಆದರೂ ಕೂಡಾ ತಕ್ಷಣವೇ ಆರೋಗ್ಯ ಕೇಂದ್ರಗಳಿಗೆ ತೆರಳಿ ಚಿಕ್ಸಿತೆ ಪಡೆಯಬೇಕು. ಕಾರ್ಮಿಕರಿಗಾಗಿಯೇ ಆಗಾಗ ಇಂತಹ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತದೆ’ ಎಂದರು.

‘ನರೇಗಾ ಯೋಜನೆಯಲ್ಲಿ ಕಾರ್ಮಿಕರಿಗೆ 100 ದಿನಗಳ ಕಾಲ ಕೆಲಸ ಲಭ್ಯವಿರುತ್ತದೆ. ಕೃಷಿ ದಿನಗಳನ್ನು ಹೊರತು ಪಡಿಸಿ ಬೇರೆ ದಿನಗಳಲ್ಲಿ ಯಾವಾಗ ಬೇಕಾದರೂ ಬಂದು ಕೆಲಸ ಮಾಡಬಹುದು. ಪ್ರತಿಯೊಬ್ಬರೂ ಯೋಜನೆಯ ನಿಯಮಾನುಸಾರ ಕೆಲಸ ಮಾಡಿ ಕೂಲಿ ಮೊತ್ತ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ಸುನೀಲ್ ಕುಮಾರ್, ಎಂಐಎಸ್ ಸಂಯೋಜಕ ರಾಜು, ತಾಂತ್ರಿಕ ಸಹಾಯಕ ಅರವಿಂದ, ಐಇಸಿ ಸಂಯೋಜಕ ಮಲ್ಲಿಕಾರ್ಜುನ, ಅಭಿವೃದ್ಧಿ ಅಧಿಕಾರಿ ಶಂಕರ್, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಕೂಲಿ ಕಾರ್ಮಿಕ ಸಂಘದ ಶರಣಗೌಡ, ಹನುಮಂತ, ರೇಣುಕಾ, ಕಾಯಕ ಬಂಧುಗಳು, ಹಾಗೂ ಕೂಲಿ ಕಾರ್ಮಿಕರು, ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-30-2036865161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.