ಹುಣಸಗಿ: ತಾಲ್ಲೂಕಿನ ಅಗ್ನಿ, ಅಗತೀರ್ಥ, ಬೈಚಬಾಳ, ಕನ್ನಳ್ಳಿ, ನಾರಾಯಣಪುರ ಸೇರಿದಂತೆ ಇತರ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಒರಡಿಯಾ ಭೇಟಿ ನೀಡಿ ಪರೀಶೀಲನೆ ನಡೆಸಿದರು.

ತಾಲ್ಲೂಕಿನಲ್ಲಿ ಯಾವುದೇ ಹಳ್ಳಿಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕೇಂದ್ರ ಸ್ಥಾನದಲ್ಲಿದ್ದು ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು. ಬಳಿಕ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಶಾಲಾ ಅಭಿವೃದ್ಧಿ ಕಾಮಗಾರಿಗಳು ಕರ ವಸೂಲಾತಿ, 15ನೇ ಹಣಕಾಸು, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಸ್ವಚ್ಛ ಭಾರತ ಮಿಷನ್, ಶುದ್ಧ ಕುಡಿಯುವ ನೀರು ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಬೈಚಬಾಳ ಹಾಗೂ ಅಗ್ನಿ ಗ್ರಾಮದಲ್ಲಿ ಮಾತನಾಡಿ, ‘ಉದ್ಯೋಗಖಾತ್ರಿ ಯೋಜನೆಯಡಿ ಕೆಲಸ ಕೇಳಿಕೊಂಡು ಬರುವ ಪ್ರತಿಯೊಬ್ಬ ಕಾರ್ಮಿಕರಿಗೂ ಎನ್ಎಂಆರ್ ತೆಗೆದು ಎಲ್ಲರಿಗೂ ಕೆಲಸ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಸ್ಥಳದಲ್ಲಿ ಹಾಜರಿದ್ದ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿತಾ.ಪಂ ಇಒ ಬಸಣ್ಣ ನಾಯಕ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಎಚ್.ಡಿ. ಪಾಟೀಲ, ಶ್ರೀಶೈಲ್ ಹಳ್ಳಿ, ಬೈಚಬಾಳ ಗ್ರಾಪಂ ಆಡಳಿತಧಿಕಾರಿ ಮಹಿಬೂಬಸಾಬ್ ಖಾಜಿ, ಲಾಲಸಾಬ್, ಅಭಿವೃದ್ಧಿ ಅಧಿಕಾರಿಗಳಾದ ಹಣಮಂತರಾಯ ಹೆಗ್ಗೂರು, ಝಹಿರಸಾಬ್, ತಾಂತ್ರಿಕ ಸಂಯೋಜಕ ಸುನೀಲ್ ಕುಮಾರ್, ಟಿಐಇಸಿ ಸಂಯೋಜಕ ಮಲ್ಲಿಕಾರ್ಜುನ, ತಾಂತ್ರಿಕ ಸಹಾಯಕ ಕುಮಾರ್ ಕೌದಿ, ಮಹೇಶ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-30-649112223

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.