ಹುಣಸಗಿ: ಶಾಲೆಯ ದಾಖಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬ ಉದ್ದೇಶದಿಂದ ತಾಲ್ಲೂಕಿನ ಚನ್ನೂರ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಮೇಶ ಅಂಗಡಿ ಅವರು ಒಂದನೇ ತರಗತಿಗೆ ಪ್ರವೇಶ ಪಡೆಯುವ ಪ್ರತಿ ವಿದ್ಯಾರ್ಥಿ ಹೆಸರಿನಲ್ಲೂ ₹2,000 ಠೇವಣಿ ಇಡಲು ಮುಂದಾಗಿದ್ದಾರೆ.

ತಾಂಡಾದ ಮಕ್ಕಳು ಇಲ್ಲಿನ ಸರ್ಕಾರಿ ಶಾಲೆಗಳಲ್ಲಿಯೇ ಕಲಿತು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳಲಿ ಎಂಬ ಉದ್ದೇಶದಿಂದ ರಮೇಶ ಅಂಗಡಿ ಅವರು ಈ ಉಪಕ್ರಮ ಕೈಗೊಂಡಿದ್ದಾರೆ.

‘ಕಳೆದ ವರ್ಷ ನಮ್ಮ ಶಾಲೆಯಲ್ಲಿ 11 ವಿದ್ಯಾರ್ಥಿಗಳು ಒಂದನೇ ತರಗತಿಗೆ ಪ್ರವೇಶ ಪಡೆದಿದ್ದರು. ಈ ಬಾರಿ ಇನ್ನೂ ಹೆಚ್ಚಿನ ಮಕ್ಕಳು ನಮ್ಮ ಶಾಲೆಯಲ್ಲಿ ಪ್ರವೇಶ ಪಡೆದು ನಿತ್ಯ ಶಾಲೆಗೆ ಬರುವಂತಾಗಲಿ ಎಂಬ ಸದುದ್ದೇಶದಿಂದ ನಮ್ಮ ಅಣ್ಣ ಶಿವಶರಣಪ್ಪ ಅಂಗಡಿ ಅವರ ಸ್ಮರಣಾರ್ಥ ಮಕ್ಕಳ ಹೆಸರಿನಲ್ಲಿ ಠೇವಣಿ ಇಡಲು ನಿರ್ಧರಿಸಿದ್ದೇನೆ’ ಎಂದು ಶಿಕ್ಷಕ ರಮೇಶ ಅಂಗಡಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

‘ನಮ್ಮ ಶಾಲೆಗೆ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಮೂರು ಸುಸಜ್ಜಿತ ಕೋಣೆಗಳಿವೆ. ಇಬ್ಬರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ನಿತ್ಯ ವಿದ್ಯಾರ್ಥಿಗಳಿಗೆ ಬಿಸಿಯೂಟ, ಹಾಲು, ಮೊಟ್ಟೆ ನೀಡಲಾಗುತ್ತದೆ. ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಯೋಜನೆಯಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ’ ಎಂದು ಶಾಲೆ ಮುಖ್ಯಶಿಕ್ಷಕ ಬಸಪ್ಪ ಅಭಿಪ್ರಾಯಪಟ್ಟರು.

‘ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರು ಕಾಳಜಿ ವಹಿಸುತ್ತಿದ್ದಾರೆ. ಕಳೆದ ವರ್ಷ ಶಾಲೆಯ ಎಲ್ಲ ಮಕ್ಕಳಿಗೆ ಶಿಕ್ಷಕ ರಮೇಶ ಅಂಗಡಿ ಅವರು ಸ್ವಂತ ಖರ್ಚಿನಿಂದ ಕ್ರೀಡಾ ಸಮವಸ್ತ್ರ ನೀಡುವ ಮೂಲಕ ಪ್ರೋತ್ಸಾಹ ನೀಡಿದ್ದರು’ ಎಂದು ಎಸ್ಡಿಎಂಸಿ ಅಧ್ಯಕ್ಷ ಕೃಷ್ಣಾನಾಯಕ ಹೇಳಿದರು.

‘ಚನ್ನೂರ ತಾಂಡಾ ಶಾಲೆಯ ಶಿಕ್ಷಕರ ಈ ಕಾರ್ಯ ತಾಲ್ಲೂಕಿನ ಇತರ ಶಿಕ್ಷಕರಿಗೂ ಮಾದರಿಯಾಗಿದೆ’ ಎಂದು ವಜ್ಜಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವನಗೌಡ ಪಾಟೀಲ ಚನ್ನೂರ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.