ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

450 ಜನರಿಗೆ ನೇತ್ರ ಶಸ್ತ್ರ ಚಿಕಿತ್ಸೆಗೆ ಅಣಿ

Published : 28 ಸೆಪ್ಟೆಂಬರ್ 2024, 15:51 IST
Last Updated : 28 ಸೆಪ್ಟೆಂಬರ್ 2024, 15:51 IST
ಫಾಲೋ ಮಾಡಿ
Comments

ಹುಣಸಗಿ: ಪಟ್ಟಣದ ಯುಕೆಪಿ ಕ್ಯಾಂಪ್‌ನ ನೀಲಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು, ಜಿಲ್ಲಾ ಅಂಧ್ವತ್ವ ನಿವಾರಣಾ ಸಂಸ್ಥೆ, ನಾಗಣ್ಣ ಸಾಹುಕಾರ ದಂಡಿನ್ ವತಿಯಿಂದ ಹಮ್ಮಿಕೊಂಡಿದ್ದ ನೇತ್ರ ಉಚಿತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು  ಶಾಸಕ ರಾಜಾವೇಣುಗೋಪಾಲ ನಾಯಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಅದನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಅಲ್ಲದೇ ಪ್ರತಿಯೊಬ್ಬರು ವರ್ಷದಲ್ಲಿ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಮಾತನಾಡಿ, ನಮ್ಮ ಭಾಗದ ಜನರಿಗೆ ಸದುಪಯೋಗವಾಗಲೆಂದು ಉಚಿತ ನೇತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಂಡಿದೆ. ಇದಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ’ ಎಂದರು.

ಈ ಶಿಬಿರದಲ್ಲಿ 920ಕ್ಕೂ ಹೆಚ್ಚು ಜನರು ಪಾಲ್ಗೊಂಡು ನೇತ್ರ ತಪಾಸಣೆ ಮಾಡಿಸಿಕೊಂಡರು. ಇದರಲ್ಲಿ 450 ಜನರಿಗೆ ಶಸ್ತ್ರಚಿಕಿತ್ಸೆ ಅಗತ್ವವಿದೆ. ಮೊದಲ ಹಂತದಲ್ಲಿ 150 ಜನರನ್ನು ಶಸ್ತ್ರಚಿಕಿತ್ಸೆಗೆ ಬೆಂಗಳೂರಗೆ ಕಳುಹಿಸಿಕೊಡಲಾಗಿದೆ. ಇನ್ನೂ ಉಳಿದವರಿಗೆ ಹಂತ ಹಂತವಾಗಿ ಕಳುಹಿಸಿ ಶಸ್ತ್ರಚಿಕಿತ್ಸೆ ಮಾಡಿಸಲಾಗುತ್ತದೆ ಎಂದು  ಎಂದು ಶಂಕರ ಕಣ್ಣಿನ ಆಸ್ಪತ್ರೆಯ ಡಾ. ಭರತಕುಮಾರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನಾಗಣ್ಣ ಸಾಹು ದಂಡಿನ್, ಕೆಪಿಸಿಸಿ ಸದಸ್ಯ ಸಿದ್ದಣ್ಣ ಮಲಗಲದಿನ್ನಿ, ರಾಜಾ ಸಂತೋಷನಾಯಕ, ಪ.ಪಂ.ಅಧ್ಯಕ್ಷ ತಿಪ್ಪಣ್ಣ ನಾಯ್ಕ, ಪ.ಪಂ.ಉಪಾಧ್ಯಕ್ಷ ಶಾಂತಣ್ಣ ಮಲಗಲದಿನ್ನಿ, ಮಲ್ಲಣ್ಣ ಸಾಹುಕಾರ ಮುಧೋಳ, ಶರಣು ದಂಡಿನ್, ಶರಣಗೌಡ ಪಾಟೀಲ. ಬಸವರಾಜ ಸಜ್ಜನ್, ಆರ್.ಎಂ.ರೇವಡಿ, ಸಿದ್ದು ಮುದಗಲ್, ಬಾಪುಗೌಡ ಪಾಟೀಲ, ರವಿ ಮಲಗಲದಿನ್ನಿ ಹಾಗೂ ವೈದ್ಯಾಧಿಕಾರಿ ಡಾ. ಎಸ್.ಬಿ.ಪಾಟೀಲ ಸೇರಿದಂತೆ ಇತರರಿದ್ದರು.

ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪ್‌ನಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದ್ದಾರೆ. ಇನ್ನು ಈ ಶಿಬಿರದಲ್ಲಿ 450ಕ್ಕೂ ಹೆಚ್ಚು ಜನರಿಗೆ ಮದುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಮಾಡಲಾಯಿತು.

ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪ್‌ನಲ್ಲಿ ನಡೆದ ನೇತ್ರ ಉಚಿತ ಚಿಕಿತ್ಸಾ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡು ಶಸ್ತ್ರಚಿಕಿತ್ಸೆ ಅಗತ್ಯ ಇರುವ 150 ಜನರನ್ನು ಮೊದಲ ಹಂತದಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪ್‌ನಲ್ಲಿ ನಡೆದ ನೇತ್ರ ಉಚಿತ ಚಿಕಿತ್ಸಾ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡು ಶಸ್ತ್ರಚಿಕಿತ್ಸೆ ಅಗತ್ಯ ಇರುವ 150 ಜನರನ್ನು ಮೊದಲ ಹಂತದಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT