ಹುಣಸಗಿ: ‘ವಿದ್ಯಾರ್ಥಿಗಳಲ್ಲಿ ಅಗಾಧವಾದ ಪ್ರತಿಭೆ ಇರುತ್ತದೆ. ಆದರೆ ಅವರಿಗೆ ಸೃಜನಶೀಲತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳವಣಿಗೆ ಕುರಿತು ಸೂಕ್ತ ಮಾರ್ಗದರ್ಶನ ಅಗತ್ಯ’ ಎಂದು ಅಗಸ್ತ್ಯ ಫೌಂಡೇಶನ್ ಪ್ರಮುಖ ನಿಂಗಣ್ಣ ಬಂಡಿ ಹೇಳಿದರು.

ಹುಣಸಗಿ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ನಾವಿನ್ಯತೆ ಮೇಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಹಾಗೂ ವಿನ್ಯಾಸ ಚಿಂತನೆಗೆ ತಕ್ಕಂತೆ ವಿಶೇಷ ಒತ್ತು ನೀಡುವ ಮೂಲಕ ಪ್ರತಿಭೆಗಳನ್ನು ಗುರುತಿಸುವಂತಾಗಬೇಕಿದೆ. ವಿದ್ಯಾರ್ಥಿಗಳು ತಮ್ಮ ಗ್ರಾಮ ಹಾಗೂ ಸುತ್ತಮುತ್ತಲಿನ ಸಾಮಾಜೀಕ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ತಕ್ಕ ಪರಿಹಾರಗಳನ್ನು ಕಂಡುಹಿಡಿಯುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದಾಗಿ ಮಕ್ಕಳಲ್ಲಿ ಆತ್ಮವಿಶ್ವಾಸ, ಸಂವಹನ ಕೌಶಲ್ಯ ಹೆಚ್ಚಲು ಸಾಧ್ಯ’ ಎಂದರು.

ಶಾಲೆ ಮುಖ್ಯ ಶಿಕ್ಷಕ ವಿಠ್ಠಲ್ ಚವ್ಹಾಣ ಮಾತನಾಡಿ, ‘ನಮ್ಮ ಶಾಲೆಯ ವಿದ್ಯಾರ್ಥಿನಿಯರು ನಾವಿನ್ಯತೆ ಮೇಳದಲ್ಲಿ ಮಾದರಿಯ ಪರಿಸರ ಸಂರಕ್ಷಣೆ, ನೀರು ಸಂರಕ್ಷಣೆ, ತ್ಯಾಜ್ಯ ವಸ್ತುಗಳ ಮರುಬಳಕೆ, ಸೌರಶಕ್ತಿ ಬಳಕೆ ಸೇರಿದಂತೆ ಹಲವು ಉಪಯುಕ್ತ ಮಾದರಿ ಪ್ರಾಜೆಕ್ಟ್ಗಳನ್ನು ತಯಾರಿಸಿ ಪ್ರದರ್ಶಿಸಿರುವುದು ಒಳ್ಳೇಯ ಬೆಳವಣಿಗೆಯಾಗಿದೆ’ ಎಂದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಗುರುರಾಜ ಜೋಶಿ, ಮಶಾಕ ಯಾಳಗಿ, ಭೀಮಣ್ಣ ವಾಲ್ಮೀಕಿ, ಲಲಿತಾ, ನಾಗನಗೌಡ ಪಾಟೀಲ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.