ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾರಾಯಣಪುರ |‘ಗರ್ಭಿಣಿಯರು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ’

Published 7 ಆಗಸ್ಟ್ 2024, 14:25 IST
Last Updated 7 ಆಗಸ್ಟ್ 2024, 14:25 IST
ಅಕ್ಷರ ಗಾತ್ರ

ನಾರಾಯಣಪುರ: ‘ಗರ್ಭದಲ್ಲಿನ ಮಗು ಆರೋಗ್ಯಯುತವಾಗಿ ಬೆಳವಣಿಗೆ ಹೊಂದಲು ಗರ್ಭೀಣಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು’ ಎಂದು ಆಶಾ ಸುಗಮಕಾರರಾದ ಈರಮ್ಮ ಹೇಳಿದರು.

ಸ್ಥಳೀಯ ಅಂಗನವಾಡಿ ಕೇಂದ್ರ–2 ರಲ್ಲಿ ಮಂಗಳವಾರ ನಡೆದ ಆರೋಗ್ಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಬಾಣಂತಿಯರು ಪೌಷ್ಟಿಕ ಆಹಾರ ಸೇವನೆ ಮಾಡಬೇಕು, ಮಗುವಿನ ಬೆಳವಣಿಗೆಗೆ ಸ್ತನ್ಯಪಾನ ಮಾಡಿಸಬೇಕು. ಸೊಳ್ಳೆ ಉತ್ಪತ್ತಿಯಾಗದಂತೆ, ಎಲ್ಲೆಂದರಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳುವದರಿಂದ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಯಬಹುದು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ನಾಗಮ್ಮ ಕೋಳೂರ, ಸಂಗಮೇಶ ಕೂಲಬಾವಿ, ಈರಣ್ಣ ಪತ್ತಾರ, ಶಕುಂತಲಾ ಹಿರೇಮಠ, ಅನ್ನಪೂರ್ಣ, ರೇಣುಕಾ, ನೀಲಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT