ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನೂ ಎಂಎಲ್ಸಿ ಟಿಕೆಟ್ ಆಕಾಂಕ್ಷಿ; ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಶರಣಭೂಪಾಲರೆಡ್ಡಿ

Last Updated 18 ನವೆಂಬರ್ 2021, 3:17 IST
ಅಕ್ಷರ ಗಾತ್ರ

ಯಾದಗಿರಿ: ‘ವಿಧಾನ ಪರಿಷತ್ (ಸ್ಥಳೀಯ ಸಂಸ್ಥೆ) ಚುನಾವಣೆಗೆ ನಾನು ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಧಾನ ಪರಿಷತ್‌ ಚುನಾವಣೆಗೆ ಟಿಕೆಟ್ ನೀಡುವಂತೆ ಈಗಾಗಲೇ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಆದರೆ, ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ’ ಎಂದು ತಿಳಿಸಿದರು.

‘ವಿಧಾನ ಪರಿಷತ್ ಚುನಾವಣೆ ಕಾರಣ ನವೆಂಬರ್ 19 (ಶುಕ್ರವಾರ) ರಂದು ಮಧ್ಯಾಹ್ನ 3 ಗಂಟೆಗೆ ನಗರದ ಗ್ರಾಮೀಣ ಪೊಲೀಸ್‌ ಠಾಣೆ ಸಮೀಪದ ವನಿಕೇರಿ ಲೇಔಟ್‌ನಲ್ಲಿ ಬಿಜೆಪಿಯಿಂದ ಜನಸ್ವರಾಜ್ ಸಮಾವೇಶ ಆಯೋಜಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಅವರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ, ಗೃಹ ಸಚಿವ ಅಗರ ಜ್ಞಾನೇಂದ್ರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ವಸತಿ ಸಚಿವ ವಿ.ಸೋಮಣ್ಣ, ಸಂಸದರಾದ ಪ್ರತಾಪ್‌ ಸಿಂಹ, ರಾಜಾ ಅಮರೇಶ್ವರ ನಾಯಕ, ಶಾಸಕರಾದ ವೆಂಕಟರಡ್ಡಿ ಮುದ್ನಾಳ, ನರಸಿಂಹ ನಾಯಕ (ರಾಜೂಗೌಡ), ಎನ್.ಮಹೇಶ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ‌ ಎಸ್‌.ಕೇಶವಪ್ರಸಾದ್‌ ಸೇರಿದಂತೆ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ’ ಎಂದರು.

‘ಸಮಾವೇಶದ ನಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಲಾಗುವುದು’ ಎಂದು ಹೇಳಿದರು.

ಮಾಜಿ ಶಾಸಕ ಡಾ.ವೀರಬಸವಂತರಡ್ಡಿ ಮುದ್ನಾಳ, ಜಿಲ್ಲಾ ವಕ್ತಾರ ಎಚ್.ಸಿ.ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ದೇವಿಂದ್ರನಾಥ ನಾದ್, ಗುರು ಕಾಮಾ, ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ಮಾಧ್ಯಮ ವಕ್ತಾರ ವಿರೂಪಾಕ್ಷಯ್ಯ ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT