ಗುರುವಾರ , ನವೆಂಬರ್ 14, 2019
19 °C

32ನೇ ಜಿಲ್ಲೆಗೆ ಭೇಟಿ ನೀಡಿದ್ದೇನೆ: ಕಟೀಲ್ 

Published:
Updated:

ಯಾದಗಿರಿ: ಪಕ್ಷ ಸಂಘಟನೆಗೆ ನಗರಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರು ಮಾತಿನ ಭರದಲ್ಲಿ ಈಗಾಗಲೇ 31 ಜಿಲ್ಲೆಗಳಿಗೆ ಭೇಟಿ ನೀಡಿ ಈಗ 32 ನೇ ಜಿಲ್ಲೆಗೆ ಬಂದಿದ್ದೇನೆ ಎಂದಿದ್ದಾರೆ. ಈ ಮೂಲಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಿಗೆ ರಾಜ್ಯದಲ್ಲಿರುವ ಜಿಲ್ಲೆಗಳ ಬಗ್ಗೆ ಮಾಹಿತಿ ಇಲ್ಲವೆ ಎಂದು ಪ್ರಶ್ನಿಸುವಂತಾಗಿದೆ. 

ನಗರದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನನಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷಸ್ಥಾನ ನೀಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ.ಕಾರ್ಯಕರ್ತರ ಭೇಟಿ, ಸಂಘಟನಾ ಪರ್ವ  ನಡೆಯುತ್ತಿದೆ. ಅಲ್ಲದೆ ಮತಗಟ್ಟೆ ಸಮಿತಿ ರಚನೆ ಮಾಡುವುದು ಸೇರಿದಂತೆ ಸದಸ್ಯತ್ವ ಅಭಿಯಾನಕ್ಕೆ ವೇಗ ಕೊಡುವುದಕ್ಕೆ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಬಂದಿದ್ದೇನೆ ಎಂದು ತಿಳಿಸಿದರು.

ಮಹಾತ್ಮ ಗಾಂಧಿಯವರ 150ನೇ ಜನ್ಮ ದಿನ ಆಚರಣೆ ನಿಮಿತ್ಯ ರಾಷ್ಟ್ರಾದ್ಯಂತ ಪಾದಯಾತ್ರೆ ಕಾರ್ಯ ನಡೆಯುತ್ತಿದೆ. ಅದಕ್ಕೂ ವೇಗ ಕೊಡಲು ಬಂದಿದ್ದೇನೆ.

ಈಗಾಗಲೇ ನಾವು 31 ಜಿಲ್ಲೆಗಳನ್ನು ಪ್ರವಾಸ ಮಾಡಿ ಈಗ 32 ಜಿಲ್ಲೆ ಯಾದಗಿರಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)