ನಗರ ಅಶ್ರಯ ಸಮಿತಿ ಅಧ್ಯಕ್ಷ ವಸಂತ ಸುರಪುರಕರ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಆಸಕ್ತಿವಹಿಸಿ ಅವರು 2021ರಲ್ಲಿ ನಿವೇಶನ ಹೊಂದಿರುವ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವಿನ ಅಭಯವಾಗಿ ನಗರಸಭೆಗೆ ಒಟ್ಟು 774 ಮನೆ ಮಂಜೂರಾತಿ ಮಾಡಿಸಿದ್ದರು. ಅದರಲ್ಲಿ 740 ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲಾಗಿತ್ತು. ಅದರಲ್ಲಿ 424 ಫಲಾನುಭವಿಗಳು ವಿವಿಧ ಹಂತದಲ್ಲಿ ಮನೆ ನಿರ್ಮಿಸಿಕೊಳ್ಳುವ ಕೆಲಸ ಸಾಗಿದೆ. ಇನ್ನೂ 216 ಫಲಾನುಭವಿಗಳು ಮನೆ ನಿರ್ಮಿಸಿಕೊಂಡಿಲ್ಲ. ಅಂತಹ ಫಲಾನುಭವಿಗಳಿಗೆ ನೋಟಿಸ್ ಜಾರಿ ಮಾಡಿ 15 ದಿನದಲ್ಲಿ ಮನೆ ನಿರ್ಮಾಣದ ಕೆಲಸ ಆರಂಭಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಫಲಾನುಭವಿಗಳಿಗೆ ಮಾಹಿತಿ ನೀಡಲಾಯಿತು ಅವರು ತಿಳಿಸಿದರು.