ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮರಳು ಸಂಗ್ರಹ: ಎಸ್ಪಿ ದಾಳಿ

ಕೋಟ್ಯಂತರ ಮೌಲ್ಯದ ಅಕ್ರಮ ಮರಳು ಜಪ್ತಿ ಮಾಡಿದ ಪೊಲೀಸರು
Last Updated 5 ಜನವರಿ 2020, 10:10 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮೆಡಗಿ, ಚೌಡೇಶ್ವರಾಳ, ಅಡ್ಡೊಡಗಿ ಹಾಗು ಇತರೆ ಸ್ಥಳಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 325 ಟಿಪ್ಪರ್‌ಗಳಷ್ಟು ಮರಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನವಣೆ ನೇತೃತ್ವದಲ್ಲಿ ದಾಳಿ ಮಾಡಿ ಜಪ್ತಿ ಮಾಡಲಾಯಿತು.

ಜಪ್ತಿ ಮಾಡಿದ ಮರಳು ಅಂದಾಜು ಮೌಲ್ಯ ₹1 ಕೋಟಿಗೂ ಅಧಿಕ ಎಂದು ತಿಳಿದು ಬಂದಿದೆ. ಅಕ್ರಮ ಮರಳು ಸಂಗ್ರಹಿಸಿರುವವರ ಬಗ್ಗೆ ಇನ್ನೂ ಮಾಹಿತಿ ಸಂಗ್ರಹಿಸಬೇಕು. ತನಿಖೆ ನಂತರ ತಿಳಿದು ಬರಲಿದೆ ಎಂದುಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನವಣೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಎಗ್ಗಿಲ್ಲದೆ ಅಕ್ರಮವಾಗಿ ಮರಳು ಮಾರಾಟ ಮತ್ತು ಸಂಗ್ರಹ ಮಾಡಲಾಗುತ್ತಿತ್ತು. ಎಸ್‌ಪಿ ನೇತೃತ್ವದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.

ದಾಳಿಯಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್‌ ನಿಂಗಣ್ಣ ಬಿರಾದಾರ್‌,ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಸದಾಶಿವ ಎಸ್‌., ದೌಲತ್ ಎನ್‌.ಕೆ., ಎಸ್‌.ಎಂ.ಪಾಟೀಲ ಸಿಬ್ಬಂದಿಯಾದ ಶಶಿಕುಮಾರ್ ರಾಥೊಡ, ಮಲ್ಲಿಕಾರ್ಜುನ ಪೂಜಾರ ಪಾಲ್ಗೊಂಡಿದ್ದರು.

ಸುರಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT