ಕೆಂಭಾವಿ: ‘ಇಂದಿರಾ ಕ್ಯಾಂಟೀನ್ಗಳು ಬಡವರ ಅನ್ನದಾನದ ಕೇಂದ್ರಗಳಾಗಿ ಕಾರ್ಯ ನಿರ್ವಹಿಸುತ್ತಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಶುಕ್ರವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು,‘ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹೆಸರಿನಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಕ್ಯಾಂಟೀನ್ಗಳು ಕಾರ್ಯನಿರ್ವಹಿಸುತ್ತಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ರಾಜ್ಯದಲ್ಲಿ 200ಕ್ಕೂ ಅಧಿಕ ಇಂದಿರಾ ಕ್ಯಾಂಟೀನ್ಗಳ ಸ್ಥಾಪನೆಗೆ ಕ್ರಮ ಕೈಗೊಂಡಿದ್ದಾರೆ’ ಎಂದರು.

‘ಐದು ಮತ್ತು ಹತ್ತು ರೂಪಾಯಿಗಳಲ್ಲಿ ಉಪಾಹಾರ ಮತ್ತು ಊಟ ದೊರೆಯುತ್ತದೆ’ ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಉಪಾಹಾರ ಕೋಣೆ, ಅಡುಗೆ ಮನೆ, ಬಯಲು ಜಾಗ ಸೇರಿ ವಿವಿಧ ಕಟ್ಟಡ, ಇಲ್ಲಿರುವ ಸೌಕರ್ಯಗಳನ್ನು ವೀಕ್ಷಿಸಿ ಜನತೆಗೆ ಯಾವ ತೊಂದರೆಯಾಗದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪುರಸಭೆ ಅಧ್ಯಕ್ಷ ರಹೆಮಾನ್ ಪಟೇಲ್ ಯಲಗೋಡ, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕಂಬಾರ, ಯೋಜನಾ ನಿರ್ದೇಶಕ ಲಕ್ಷ್ಮೀಕಾಂತ, ಮುಖ್ಯಾಧಿಕಾರಿ ಮಹ್ಮದ್ ಯೂಸೂಫ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸರೆಡ್ಡಿ ಅನಪೂರ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ಧನಗೌಡ ಪೊಲೀಸ್ ಪಾಟೀಲ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ವಾಮನರಾವ ದೇಶಪಾಂಡೆ, ಪುರಸಭೆ ಸದಸ್ಯೆ ಪಾರ್ವತಿ ಹಂದ್ರಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಯಾಳಗಿ, ಆಶ್ರಯ ಸಮಿತಿ ಅಧ್ಯಕ್ಷ ಶರಣಬಸ್ಸು ಡಿಗ್ಗಾವಿ ಸೇರಿದಂತೆ ಹಲವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.