ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ: ನ್ಯಾಯಾಧೀಶರ ವಸತಿಗೃಹ ಉದ್ಘಾಟನೆ

Last Updated 26 ಮಾರ್ಚ್ 2023, 7:18 IST
ಅಕ್ಷರ ಗಾತ್ರ

ಶಹಾಪುರ: ‘ನ್ಯಾಯಾಲಯದಲ್ಲಿ ಪ್ರಕರಗಳು ಇತ್ಯರ್ಥವಾಗದಿದ್ದರು ಜನರು ನ್ಯಾಯಾಂಗದ ಮೇಲೆ ಇಟ್ಟ ಬಲವಾದ ನಂಬಿಕೆ ಹಾಗೂ ವಿಶ್ವಾಸವೇ ಕಾರಣವಾಗಿದೆ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ತಿಳಿಸಿದರು.

ನಗರದ ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ ₹1.44ಕೋಟಿ ವೆಚ್ಚದಲ್ಲಿ ನಿರ್ಮಿಸಿದ ನ್ಯಾಯಾಧೀಶರ ವಸತಿಗೃಹ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯಾಲಯದಲ್ಲಿ ಅಗತ್ಯ ಸೌಲಭ್ಯಗಳ ಅಗತ್ಯವಿದೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮಲ್ಲಿ ಉತ್ತಮ ಸೌಲಭ್ಯಗಳನ್ನು ಸರ್ಕಾರ ನೀಡಿದೆ. ವಕೀಲರು ಸಾಮಾಜಿಕ ಸುಧಾರಣೆಯ ಎಂಜಿನಿಯರ್ ಆಗಿದ್ದಾರೆ ಎಂಬುವುದು ಯಾರು ಮರೆಯಬಾರದು. ಇಲ್ಲಿನ ಜನತೆಯಲ್ಲಿ ನ್ಯಾಯಾಂಗದ ಬಗ್ಗೆ ಅಪಾರ ಗೌರವ ಇದೆ ಎಂದರು.

ಯಾದಗಿರಿಯಲ್ಲಿ ನಿರ್ಮಾಣ ವಾಗುತ್ತಿರುವ ಜಿಲ್ಲಾ ನ್ಯಾಯಾಲಯದ ನೂತನ ಕಟ್ಟಡ ಕಾಮಗಾರಿ ತ್ವರಿತವಾಗಿ ಮುಕ್ತಾಯಗೊಳಿಸಲು ಸೂಚಿಸಿದೆ. ಸಾಧ್ಯವಾದಷ್ಟು ಬೇಗ ಕಟ್ಟಡ ಕಾಮಗಾರಿ ಮುಕ್ತಾಯಗೊಳ್ಳಲಿದೆ. ಅಲ್ಲದೆ ಇನ್ನೂ ಎರಡು ಜಿಲ್ಲಾ ನ್ಯಾಯಾಲಯದ ಕೋರ್ಟ್ ಬೇಗ ಸ್ಥಾಪಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಹೈಕೋರ್ಟ್ ನ್ಯಾಯಾಮೂರ್ತಿಗಳ ಪತ್ನಿ ಅನುಪಮ ದೇಸಾಯಿ, ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಜಿ.ನಂಜುಂಡಯ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸೊಹೆಲ್ ಅಹ್ಮದ ಕುನ್ನಿಬಾವಿ, ಹಿರಿಯ ಶ್ರೇಣಿಯ ನ್ಯಾಯಾಲಯದ ನ್ಯಾಯಾಧೀಶ ಸಿದ್ದರಾಮ ಟಿ.ಪಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅಭಿಮನ್ಯು, ವಕೀಲರ ಸಂಘದ ಅಧ್ಯಕ್ಷ ಸಂತೋಷ ದೇಶಮುಖ, ನ್ಯಾಯಾಧೀಶರಾದ ಶೋಭಾ, ಬಸವರಾಜ, ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯಾರಾಣಿ ನಾಯಕ, ವೆಂಕೋಬ ದೇಸಾಯಿ ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ ಬುಕ್ಕಲ್, ಹಾಗೂ ಯಾದಗಿರಿ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್.ಮಾಲಿ ಪಾಟೀಲ
ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT