ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸಗಿ: ಕೃಷ್ಣಾ ನೀರಿನ ಹೊರ ಹರಿವು ಹೆಚ್ಚಳ

Last Updated 20 ಜುಲೈ 2020, 17:33 IST
ಅಕ್ಷರ ಗಾತ್ರ

ಹುಣಸಗಿ: ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಾಗುತ್ತಿದ್ದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಸವಸಾಗರದಿಂದ ಹರಿಸಲಾಗುತ್ತಿದೆ ಎಂದು ಡ್ಯಾಂ ಡಿವಿಜನ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಆಲಮಟ್ಟಿ ಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ ನಿರಂತರ 45 ಸಾವಿರಕ್ಕೂ ಹೆಚ್ಚು ಒಳಹರಿವು ದಾಖಲಾಗುತ್ತಿದೆ. ಇದರಿಂದಾಗಿ ಜಲಾಶಯದ ಮಟ್ಟ ಕಾಯುಕೊಂಡು ಹೆಚ್ಚಿನ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಸೋಮವಾರ 45,800 ಕ್ಯುಸೆಕ್ ನೀರು ಒಳಹರಿವು ಇದ್ದು ಜಲಾಶಯದ 7 ಕ್ರಸ್ಟ್‌ಗೇಟ್ ಮೂಲಕ 45,760 ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇರುವುದರಿಂದಾಗಿ ನದಿ ಪಾತ್ರದಲ್ಲಿರುವ ಹಳ್ಳಿಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿಗೆ ಇಳಿಯಬಾರದು ಎಂದು ಡ್ಯಾಂ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೋಡಿ ತಿಳಿಸಿದರು.

ಈಗಾಗಲೇ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಾಗಿದ್ದು ಭೂಮಿ ಕೂಡಾ ಹಸಿಯಾಗಿದೆ. ಆದರೆ ಭತ್ತ ಬೆಳೆಗಾರರು ಮಾತ್ರ ಕಾಲುವೆಗೆ ನೀರು ಬರುವ ದಾರಿಯನ್ನೇ ಕಾಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT