ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗಳ ಪುನರ್‌ಶ್ಚೇತನದಿಂದ ಅಂತರ್ಜಲ ಮಟ್ಟ ಹೆಚ್ಚಳ

ಕೆರೆ ಸಂಜೀವಿನಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ
Last Updated 3 ಫೆಬ್ರುವರಿ 2020, 15:47 IST
ಅಕ್ಷರ ಗಾತ್ರ

ಯಾದಗಿರಿ: ಜಲಮೂಲಗಳಾದ ಕೆರೆಗಳ ಪುನರ್‌ಶ್ಚೇತನಕ್ಕೆ ಸಂಘ ಸಂಸ್ಥೆಗಳ ಜೊತೆ ಸಾರ್ವಜನಿಕರ ಸಹಕಾರ ನೀಡಿದರೆ ಕೆರೆಗಳಲ್ಲಿ ನೀರಿನ ಅಂತರ್ಜಲ ಮಟ್ಟ ಹೆಚ್ಚುತ್ತದೆ ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಹಳಗೇರಾ ಗ್ರಾಮದಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಳಗೇರಾ ಊರು ಕೆರೆ ಬಳಕೆದಾರರ ಸಂಘ ಹಾಗೂ ಹಳಗೇರಾ ಗ್ರಾಮ ಪಂಚಾಯಿತಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ 65ನೇ ಕೆರೆ ಸಂಜೀವಿನಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೆರೆಗಳ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಕಡಿಮೆಯಾಗುತ್ತಿದೆ. ಇದರ ಪರಿಣಾಮ ಕೆರೆಗಳು ಇಲ್ಲದಂತಾಗುತ್ತಿವೆ. ಪೂರ್ವಜರು ಗ್ರಾಮಕ್ಕೊಂದು ಕೆರೆ ನಿರ್ಮಿಸುವುದರ ಹಿಂದೆ ವೈಜ್ಞಾನಿಕ ಅಂಶವಿದೆ. ಕೆರೆಯಿಂದ ಅಂತರ್ಜಲ ವೃದ್ಧಿಸುವುದರ ಜತೆಗೆ ಇಡೀ ಗ್ರಾಮಕ್ಕೆ ನೀರಿನ ಸಮಸ್ಯೆ ನೀಗಿಸುತ್ತದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮಣ್ಣಗೌಡ ಕುಡ್ಲೂರ್, ಜಿಲ್ಲಾ ಪಂಚಾಯಿತಿ ಸದಸ್ಯ ಅಮರದೀಪ್, ಎಪಿಎಂಸಿ ಅಧ್ಯಕ್ಷ ಶರಣಗೌಡ ಕಾಳೆಬೆಳಗುಂದಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿಬ್ಬಂದಿ, ಗ್ರಾಮಸ್ಥರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT